ಮೂವರು  ಲೈಂಗಿಕ ಅಲ್ಪಸಂಖ್ಯಾತರು ಶಿಕ್ಷಕರಾಗಿ ಆಯ್ಕೆ

 

 

 

 

ಗಳೂರು, ನ. 20: ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದಂತಹ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಈಗ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದ್ದರಲ್ಲಿ ಮೂವರು  ಲೈಂಗಿಕ ಅಲ್ಪಸಂಖ್ಯಾತರು ಶಿಕ್ಷಕರಾಗಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ 1:2 ರಂತೆ ದಾಖಲಾತಿಯ ಪರಿಶೀಲನೆಯನ್ನು ನಡೆಸಲಾಗಿತ್ತು. ಅದರ ಬೆನ್ನಲ್ಲೇ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ.

 

 

ರಾಜ್ಯದ ಸರ್ಕಾರಿ ಶಾಲೆಗಳಿಗೆ ಹೊಸದಾಗಿ ನೇಮಕಗೊಂಡ 13,363 ಶಿಕ್ಷಕರ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಸರ್ಕಾರಿ ಶಾಲೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದಿಂದ ಮೂವರು ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಿಸಲಾಗಿದೆ.

“ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ” ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

“15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಕಟ್ಟು ನಿಟ್ಟಾಗಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಿದ ದಿನದಿಂದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆವರೆಗಿನ ಪ್ರಕ್ರಿಯೆಯನ್ನು 9 ತಿಂಗಳ ಒಳಗೆ ಪೂರ್ಣಗೊಳಿಸಲಾಗಿದೆ” ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.

[t4b-ticker]

You May Also Like

More From Author

+ There are no comments

Add yours