ವಿದ್ಯುತ್ ಶುಲ್ಕದ ಬಾಕಿ ಮೊತ್ತ ಪಾವತಿಗೆ ಸೂಚನೆ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.21:
ಬೆಸ್ಕಾಂ ಚಿತ್ರದುರ್ಗ ವಿಭಾಗದ ವ್ಯಾಪ್ತಿಯಲ್ಲಿನ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ಸೆಪ್ಟೆಂಬರ್-2022ರ ಅಂತ್ಯಕ್ಕೆ ಬಾಕಿ ಇರುವ ಮೊತ್ತವನ್ನು ಏಳು ದಿನಗಳ ಒಳಗಾಗಿ ಪಾವತಿಸುವಂತೆ ಸೂಚಿಸಿದೆ.
ಏಳು ದಿನಗಳ ಒಳಗಾಗಿ ಪಾವತಿಸದಿದ್ದಲ್ಲಿ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಸಾರ್ವಜನಿಕರಿಗೆ ಆಗುವ ತೊಂದರೆಗೆ ಬೆಸ್ಕಾಂ ಕಂಪನಿ ಜವಾಬ್ದಾರರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ವಿದ್ಯುತ್ ಬಾಕಿ ವಿವರ ಇಂತಿದೆ. ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅಂತಿಮ ಶಿಲ್ಕು ರೂ.1648.68 ಲಕ್ಷ  ಹಾಗೂ ಬ್ಯಾಂಕ್ ಬ್ಯಾಲೆನ್ಸ್ ರೂ.172.95 ಲಕ್ಷ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಇದೆ.
ಹೊಳಲ್ಕೆರೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅಂತಿಮ ಶಿಲ್ಕು ರೂ.3758.96 ಲಕ್ಷ  ಹಾಗೂ ಬ್ಯಾಂಕ್ ಬ್ಯಾಲೆನ್ಸ್ ರೂ.141.78 ಲಕ್ಷ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಇದೆ.
ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅಂತಿಮ ಶಿಲ್ಕು ರೂ.1141.05 ಲಕ್ಷ  ಹಾಗೂ ಬ್ಯಾಂಕ್ ಬ್ಯಾಲೆನ್ಸ್ ರೂ.83.64 ಲಕ್ಷ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಇದೆ. ಒಟ್ಟು ಅಂತಿಮ ಶಿಲ್ಕು ರೂ.6548.69 ಲಕ್ಷ ಹಾಗೂ ಬ್ಯಾಂಕ್ ಬ್ಯಾಲೆನ್ಸ್ ರೂ.398.37 ಲಕ್ಷ ಬಾಕಿ ಇದೆ ಎಂದು ಬೆಸ್ಕಾಂ ಚಿತ್ರದುರ್ಗ ವಿಭಾಗ ಕಚೇರಿಯ ಕಾರ್ಯನಿರ್ವಾಹಕ ಇಂಜಿನಿಯರ್ ಡಿ.ಜಯಣ್ಣ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours