ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರಿಗೆ 98 ವರ್ಷ ತುಂಬಿದೆ. ನವೆಂಬರ್ 8 ಅವರ ಜನ್ಮದಿನ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿರುವ ಎಲ್.ಕೆ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. “ಅತ್ಯುನ್ನತ ದೃಷ್ಟಿಕೋನದ ರಾಜನೀತಿಜ್ಞ” ಎಂದು ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಕುರಿತು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಮಜನ್ಮಭೂಮಿ ಚಳವಳಿಯ ಶಿಲ್ಪಿ ಎಲ್.ಕೆ. ಅಡ್ವಾಣಿ 98 ವರ್ಷಗಳನ್ನು ಪೂರೈಸಿದ್ದಾರೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಅಡ್ವಾಣಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ, ಹೂಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ.





