ಅಂಬೇಡ್ಕರ್ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ:ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ

 

 

 

 

ಚಿತ್ರದುರ್ಗ:ಡಿ.6 :ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.

 

 

ಡಾ.ಬಿಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ನಡೆದ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ಪ್ರಯುಕ್ತ ಪ್ರತಿಮೆಗೆ  ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಮಹಾಪರಿನಿರ್ವಾಣ ದಿನದಂದು  ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ‌ ಸಲ್ಲಿಸುತ್ತೇವೆ. ಅವರು ನಮ್ಮ ದೇಶಕ್ಕೆ ಮಾಡಿದ ಅನುಕರಣೀಯ ಸೇವೆಯನ್ನು ನಾವು ಎಂದು ಮರೆಯಲು ಸಾಧ್ಯವಿಲ್ಲ. ಅವರ ಹೋರಾಟಗಳು ಲಕ್ಷಾಂತರ ಜನರಿಗೆ ಭರವಸೆಯನ್ನು ನೀಡಿತು. ಹಿಂದುಳಿದ ಮತ್ತು ತುಳಿತಕ್ಕೊಳಗಾದವರ ಧ್ವನಿಯಾಗಿ ಅವರ ಸಂವಿಧಾನ ನ್ಯಾಯವನ್ನು ನೀಡುತ್ತಿದೆ. ಭಾರತಕ್ಕೆ ಅಂತಹ ಸಮಗ್ರ ಸಂವಿಧಾನವನ್ನು ನೀಡುವ ಮುಖಾಂತರ ಎಲ್ಲಾ ವರ್ಗದ ಜೊತೆ ಅಂಬೇಡ್ಕರ್ ಅವರ ಆದರ್ಶಗಳು, ತತ್ವಗಳು ಇರುತ್ತವೆ. ಸಶಕ್ತ, ಸಮಾನತೆ, ಸದೃಢ ಭಾರತದ ಕನಸನ್ನು ಅಂಬೇಡ್ಕರ್  ಕಂಡಿದ್ದರು ಅಂತಹ ಕನಸನ್ನು ಎಲ್ಲಾರೂ ನನಸು ಮಾಡಬೇಕಿದೆ.ಶೋಷಿತ ಸಮುದಾಯದ ಏಳಿಗೆಗೆ ತಮ್ಮ ಜೀವನವನೇ ತ್ಯಾಗ ಮಾಡಿದ್ದಾರೆ. ಅವರ ತ್ಯಾಗದಿಂದ ನಾವೆಲ್ಲರೂ ಶಾಂತಿಯಿಂದ ಬದುಕುವ ವಾತವರಣ ನಿರ್ಮಾಣವಾಗಿದೆ. ಅಂಬೇಡ್ಕರ್  ಅವರು ಸದಾ ನಮ್ಮ ಚಿಂತನೆಯಲ್ಲಿ ಇರಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯತ ಸಿಇಓ ಎಂ.ಎಸ್.ದಿವಾಕರ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್, ಅಪರ ಜಿಲ್ಲಾಧಿಕಾರಿ ಎ.ಬಾಲಕೃಷ್ಣ,
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ನಾಗೇಂದ್ರ ನಾಯ್ಕ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ  ಅಲ್ಪಸಂಖ್ಯಾತ ಕಲ್ಯಾಣಧಿಕಾರಿ ರೇಖಾ,ಸಮಾಜ ಕಲ್ಯಾಣ ಇಲಾಖೆ ಸಹಾಯಕ ಉಪನಿರ್ದೇಶಕ ಓ.ಪರಮೇಶ್ವರಪ್ಪ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರಂಗಸ್ವಾಮಿ ಇದ್ದರು.
[t4b-ticker]

You May Also Like

More From Author

+ There are no comments

Add yours