ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.8:
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಎನ್.ಮಹದೇವಪುರ ಗ್ರಾಮದಲ್ಲಿ ಇದೇ ಡಿಸೆಂಬರ್ 17ರಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮವಾಸ್ತವ್ಯ ಹೂಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ಕಾಟಿಹಳ್ಳಿ, ಹಿರಿಯೂರು ತಾಲ್ಲೂಕಿನ ಬಾಲೇನಹಳ್ಳಿ, ಹೊಸದುರ್ಗ ತಾಲ್ಲೂಕಿನ ಕಾಚಾವರ, ಹೊಳಲ್ಕೆರೆ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ ವಡ್ಡರಹಟ್ಟಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.
[t4b-ticker]
+ There are no comments
Add yours