ಡಿ.14 ರಂದು ಪೊಲೀಸ್ ತರಬೇತಿ ಶಾಲೆ ಆವರಣದಲ್ಲಿ ನೂತನ ಕಟ್ಟಡಗಳ ಉದ್ಘಾಟನೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ).ಡಿ.9:
ಜಿಲ್ಲೆಯ ಐಮಂಗಲದ ಪೊಲೀಸ್ ತರಬೇತಿ ಶಾಲೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿವಿದೋದ್ದೇಶ ಉಪಯುಕ್ತತಾ ಸಂಕೀರ್ಣ ಮತ್ತು ವಾಹನ ವಿಭಾಗ ಕಟ್ಟಡಗಳ ಉದ್ಘಾಟನಾ ಸಮಾರಂಭ ಡಿ. 14 ರಂದು ಬೆ. 9.30 ಗಂಟೆಗೆ ಐಮಂಗಲದ ಪೊಲೀಸ್ ತರಬೇತಿ ಶಾಲೆಯಲ್ಲಿ ಆಯೋಜಿಸಲಾಗಿದೆ.

 

 

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ ಹಾಗೂ ಸಾರಿಗೆ ಮತ್ತು ಪ.ಪಂಗಡ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು.   ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್, ವಿಧಾನಪರಿಷತ್ ಮುಖ್ಯ ಸಚೇತಕ ಡಾ. ವೈ.ಎ. ನಾರಾಯಣಸ್ವಾಮಿ ಅವರು ಗೌರವ ಆಹ್ವಾನಿತರಾಗಿ ಪಾಲ್ಗೊಳ್ಳುವರು.  ಶಾಸಕರಾದ ಪೂರ್ಣಿಮಾ ಕೆ. ಶ್ರೀನಿವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.  ಶಾಸಕರು ಹಾಗೂ ಕೆಎಸ್‍ಆರ್‍ಟಿಸಿ ಅಧ್ಯಕ್ಷ ಎಂ. ಚಂದ್ರಪ್ಪ, ಶಾಸಕರು ಹಾಗೂ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೂಳೀಹಟ್ಟಿ ಶೇಖರ್, ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ, ಟಿ. ರಘುಮೂರ್ತಿ, ವಿಧಾನಪರಿಷತ್ ಸದಸ್ಯರಾದ ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಗ್ರಾ.ಪಂ. ಅಧ್ಯಕ್ಷೆ ಜಯಮ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  ಆರಕ್ಷಕ ಮಹಾನಿರೀಕ್ಷಕರು ಹಾಗೂ ಮಹಾನಿರ್ದೇಶಕ ಪ್ರವೀಣ್ ಸೂದ್, ತರಬೇತಿ ಪೊಲೀಸ್ ಮಹಾನಿರ್ದೇಶಕ ಡಾ. ಪಿ. ರವೀಂದ್ರನಾಥ್, ಕೆಎಸ್‍ಪಿಹೆಚ್ ವ್ಯವಸ್ಥಾಪಕ ನಿರ್ದೇಶಕ ಅರುಣ್ ಚಕ್ರವರ್ತಿ, ಪೂರ್ವ ವಲಯ ಡಿಐಜಿಪಿ ಡಾ. ಕೆ. ತ್ಯಾಗರಾಜನ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಐಮಂಗಲ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲರಾದ ಪಿ. ಪಾಪಣ್ಣ ಅವರು ತಿಳಿಸಿದ್ದಾರೆ

[t4b-ticker]

You May Also Like

More From Author

+ There are no comments

Add yours