ಚಿತ್ರದುರ್ಗ(ಕರ್ನಾಟಕ ವಾರ್ತೆ).
220/66/11 ಕೆವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ಚಿತ್ರದುರ್ಗ 220/66/11 ಕೆ.ವಿ ವಿವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆವಿ ಮಾರ್ಗಗಳ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಡಿಸೆಂಬರ್ 10ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 220/66/11 ಕೆವಿ ಚಿತ್ರದುರ್ಗ ವಿವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಕಾಪರ್ ಮೈನ್ಸ್, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಕೈಗಾರಿಕಾ ಪ್ರದೇಶ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
[t4b-ticker]
+ There are no comments
Add yours