ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ಉದ್ಘಾಟನೆ

 

 

 

 

ಚಿತ್ರದುರ್ಗ:ಶಿಕ್ಷಕರು ಸಮಾಜದ ಆಸ್ತಿ, ಶಿಕ್ಷಕರು ದೇಶದ ಭವ್ಯ ಭವಿಷ್ಯದ ನಿರ್ಮಾಣಕಾರರು ಶಿಕ್ಷಕರು ಶೈಕ್ಷಣಿಕವಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಾಗ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ ಈ ಸ್ಪರ್ಧೆಯಲ್ಲಿ ಭಾಗವಹಿಸಿರುವ ಶಿಕ್ಷಕರು ಪ್ರತಿಭಾನ್ವಿತ ಶಿಕ್ಷಕರು ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಶ್ರೀ ರವಿಶಂಕರ್ ರೆಡ್ಡಿ ಮಾತನಾಡಿದರು

ಅವರು ಇಂದು ಚಿತ್ರದುರ್ಗ ನಗರದ ತರಳಬಾಳು ಶಾಲೆಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಸಾಕ್ಷರತ ಇಲಾಖೆ ಚಿತ್ರದುರ್ಗ ಇವರ ವತಿಯಿಂದ ಆಯೋಜಿಸಿದ್ದ 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು

ಶಿಕ್ಷಕರು ಮಕ್ಕಳಿಗೆ ಬೋಧಿಸುವುದರ ಜೊತೆಯಲ್ಲಿ ಇಲಾಖೆಯು ಆಯೋಜಿಸುವ ಇಂತಹ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ ನಮ್ಮ ಜಿಲ್ಲೆಯ ಶಿಕ್ಷಕರ ಪರಿಶ್ರಮದಿಂದ ಹತ್ತನೇ ತರಗತಿಯ ಫಲಿತಾಂಶ ನಾಲ್ಕನೇ ಸ್ಥಾನ ತಲುಪಿದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ವರ್ಷದ ಫಲಿತಾಂಶ ದಲ್ಲೂ ಸಹ ಪ್ರಥಮ ಸ್ಥಾನ ಪಡೆಯುವ ಸಲುವಾಗಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು

 

 

ಜಿಲ್ಲಾ ನೋಡಲ್ ಅಧಿಕಾರಿಗಳಾದ ವಿಜ್ಞಾನ ವಿಷಯ ಪರಿವೀಕ್ಷಕರಾದ ಎಚ್ ಗೋವಿಂದಪ್ಪ ಅವರು ಮಾತನಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಿಂದ ಒಟ್ಟು 84 ಶಿಕ್ಷಕ ಸ್ಪರ್ಧಾರ್ಥಿಗಳು ಭಾಗವಹಿಸುತ್ತಿದ್ದಾರೆ. ತಾಲ್ಲೋಕು ವಿಭಾಗದಿಂದ ಆಯ್ಕೆಯಾದ ಶಿಕ್ಷಕರಿಗಾಗಿ ಭಕ್ತಿಗೀತೆ ಅಶುಭಾಷಣ ಪ್ರಬಂಧ ಸ್ಥಳದಲ್ಲೇ ಪಾಠೋಪಕರಣ ತಯಾರಿಕೆ ರಸಪ್ರಶ್ನೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಲ್ಲಾ ಶಿಕ್ಷಕರಿಗೂ ಶುಭಾಶಯಗಳು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವಿ ತಿಪ್ಪೇಸ್ವಾಮಿ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳನ್ನು ಕಲಿಕೆಯಲ್ಲಿ ಸಮೀಕರಿಸಿದಾಗ ಶೈಕ್ಷಣಿಕ ಪ್ರಗತಿ ಉತ್ತಮವಾಗುತ್ತದೆ ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಶಿಕ್ಷಕರು ಉತ್ತಮ ಕಲಾ ಪ್ರದರ್ಶನವನ್ನು ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಯ ಹಿರಿಮೆಯನ್ನು ಹೆಚ್ಚಿಸಬೇಕು ಎಂದರು

ಸ್ಪರ್ಧಾ ಕಾರ್ಯಕ್ರಮದಲ್ಲಿ ವೃತ್ತಿ ಶಿಕ್ಷಣ ವಿಷಯ ಪರಿವೀಕ್ಷಕರಾದ ಬಸವರಾಜ್ ಓಲೇಕರ್ ಜಿಲ್ಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಣ್ಣ ತೀರ್ಪುಗಾರರಾದ ಹುರುಳಿ ಬಸವರಾಜ್ ಬಿವಿನಾಥ್ ಡಾ ಮಹೇಶ್ ಮೃತ್ಯುಂಜಯ ಸ್ವಾಮಿ ರಾಮಶೇಖರ್ ರವಿಕುಮಾರ್ ರಮೇಶ್ ಹರೀಶ್ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours