ಹಬ್ಬದ ಸಂಭ್ರಮದೊಂದಿಗೆ ಒನಕೆ ಓಬವ್ವ ಜಯಂತಿ ಅದ್ಧೂರಿಯಾಗಿ ಆಚರಿಸೋಣ: ದಿವ್ಯಪ್ರಭು ಜಿ.ಆರ್.ಜೆ.

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.15:

 

 

ಈ ಬಾರಿ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಆಚರಣೆ ಇದೇ ಡಿಸೆಂಬರ್ 18 ರಂದು ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ (ಮುರುಘರಾಜೇಂದ್ರ ಕ್ರೀಡಾಂಗಣ) ಆಯೋಜಿಸಲಾಗಿದ್ದು, ಜಯಂತಿ ಆಚರಣೆಯನ್ನು ಅಂದು ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನಿರ್ಮಿಸಿ, ಸಂಭ್ರಮದೊಂದಿಗೆ ಆಚರಿಸೋಣ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಒನಕೆ ಓಬವ್ವ ಜಯಂತಿ ಆಚರಿಸುವ ಕುರಿತು ಜರುಗಿದ ಪೂರ್ವಭಾವಿ ಸಭೆಯಲ್ಲಿ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಹಾಗೂ ಛಲವಾದಿ ಮಹಾಸಭಾದ ವತಿಯಿಂದ ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಸಮಾರಂಭದ ಉದ್ಘಾಟನೆಗೆ ಆಗಮಿಸಲಿದ್ದು, ಕಾರ್ಯಕ್ರಮ ಆಯೋಜನೆಗೆ ರಚನೆಗೊಂಡಿರುವ ವಿವಿಧ ಉಪಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.  ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು.  ಇದು ಸರ್ಕಾರಿ ಕಾರ್ಯಕ್ರಮವಾಗಿರುವುದರಿಂದ ವೇದಿಕೆಯಲ್ಲಿ ಶಿಷ್ಠಾಚಾರದ ಪಾಲನೆ ಆಗಬೇಕು,  ಸಮಾರಂಭ ಜರುಗುವ ಸಂದರ್ಭದಲ್ಲಿ ವ್ಯತ್ಯಯರಹಿತವಾಗಿ ವಿದ್ಯುತ್ ಪೂರೈಕೆ ಆಗಬೇಕು, ಈ ನಿಟ್ಟಿನಲ್ಲಿ ಬೆಸ್ಕಾಂ ನಿಗಾ ವಹಿಸಬೇಕು.  ವಿವಿಧ ಜಿಲ್ಲೆಗಳಿಂದ ಆಗಮಿಸುವ ಕಲಾವಿದರಿಗೆ ಸೂಕ್ತ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಬೇಕು
ಸಮಾರಂಭಕ್ಕೆ ಬಹಳಷ್ಟು ಜನರು ಸೇರುವುದರಿಂದ, ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಗೆ ನಗರಸಭೆ ಕ್ರಮ ವಹಿಸಬೇಕು, ಊಟದ ಸ್ಥಳದಲ್ಲಿ ಗದ್ದಲ, ಗೊಂದಲ ಉಂಟಾಗದಂತೆ ಸಾಕಷ್ಟು ಕೌಂಟರ್‍ಗಳನ್ನು ನಿರ್ಮಿಸಬೇಕು, ಸಮಾರಂಭ ಸಂದರ್ಭದಲ್ಲಿ ಸನ್ಮಾನಿಸಲಾಗುವ ಸನ್ಮಾನಿತರ ಪಟ್ಟಿಯನ್ನು ಕೂಡಲೆ ಸಿದ್ಧಪಡಿಸಿ, ಇದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಯಂತಿ ಆಚರಣೆ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಕನಕವೃತ್ತದಿಂದ ಮುರುಘರಾಜೇಂದ್ರ ಕ್ರೀಡಾಂಗಣದವರೆಗೂ ಭವ್ಯ ಮೆರವಣಿಗೆ ಏರ್ಪಡಿಸಲಾಗಿದ್ದು,   ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ತಾಷರಂಡೋಲ್, ಹಗಲುವೇಷ ಸೇರಿದಂತೆ ನಮ್ಮ ನಾಡಿನ ಸಂಸ್ಕøತಿಯನ್ನು ಬಿಂಬಿಸುವ ವಿವಿಧ ಸಾಂಸ್ಕøತಿಕ ಕಲಾತಂಡಗಳು ಭಾಗವಹಿಸಿ, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ. ಎಲ್ಲ ಸಮಾಜದವರು, ಸಂಘಟನೆಗಳು, ಸಮುದಾಯ, ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸೋಣ ಎಂದರು.
ಡಿಡಿಪಿಐ ರವಿಶಂಕರರೆಡ್ಡಿ ಅವರು ಮಾತನಾಡಿ, ಮೆರವಣಿಗೆಯಲ್ಲಿ ವಿವಿಧ ಶಾಲೆಗಳ ಸುಮಾರು 500 ಕ್ಕೂ ಹೆಚ್ಚು ಹೆಣ್ಣುಮಕ್ಕಳು ಒನಕೆ ಓಬವ್ವ ವೇಷಭೂಷಣದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸಂಘಗಳ ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯನ್ನು ಆಕರ್ಷಕಗೊಳಿಸಲಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಗರದಲ್ಲಿನ ಎಲ್ಲ ಹಾಸ್ಟೆಲ್‍ಗಳ ವಿದ್ಯಾರ್ಥಿಗಳು ಮೆರವಣಿಗೆ ಹಾಗೂ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಗೀತ, ನೃತ್ಯ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಮೈದಾನದಲ್ಲಿ ಜರುಗುವ ಸಮಾರಂಭದ ವೇದಿಕೆಯಲ್ಲಿ ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನವೇ ಆರಂಭಿಸಬೇಕು,  ಇದಕ್ಕಾಗಿ ಅಗತ್ಯ ತಾಲೀಮು ನಡೆಸಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ಒನಕೆ ಓಬವ್ವ ಜಯಂತಿ ಕಾರ್ಯಕ್ರಮಕ್ಕೆ  ರಾಜ್ಯದ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸುವುದರಿಂದ ಜನರಿಗೆ ಹಾಗೂ ಸಂಚಾರಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು, ಅಗತ್ಯ ಬಿದ್ದಲ್ಲಿ, ನಗರದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಮಾರ್ಗ ಬದಲಾವಣೆಗೆ ಯೋಜನೆ ರೂಪಿಸಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಮಾತನಾಡಿ, ಸಮಾರಂಭ ಜರುಗುವ ಸ್ಥಳದಲ್ಲಿ ಈಗಾಗಲೆ ವೇದಿಕೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ.  ವೇದಿಕೆ ಪೆಂಡಾಲ್ ನಿರ್ಮಾಣದ ಬಗ್ಗೆ ಲೋಕೋಪಯೋಗಿ ಇಲಾಖೆ ನಿಗಾವಹಿಸಿ, ಸಾಮಥ್ರ್ಯದ ದೃಢೀಕರಣ ನೀಡಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್. ದಿವಾಕರ್, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಛಲವಾದಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿಹೆಚ್‍ಒ ಡಾ. ರಂಗನಾಥ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours