ಡಿ.29ರಂದು ವಿಶ್ವಮಾನವ ದಿನಾಚರಣೆ: ಅರ್ಥಪೂರ್ಣ ಆಚರಣೆಗೆ ಸೂಚನೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಡಿ.22:
ಜಿಲ್ಲಾಡಳಿತದ ವತಿಯಿಂದ ವಿಶ್ವಮಾನವ ದಿನಾಚರಣೆಯನ್ನು ಇದೇ ಡಿಸೆಂಬರ್ 29ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವ ಮಾನವ ದಿನಾಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವಮಾನವ ದಿನಾಚರಣೆ ಅಂಗವಾಗಿ ಕುವೆಂಪು ಅವರ ವಿಶ್ವಮಾನವ ಸಂದೇಶ ಕುರಿತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು. ಪ್ರಬಂಧ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲು ಅಗತ್ಯ ಕ್ರಮವಹಿಸಬೇಕು. ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಂಡು ಅರ್ಥಪೂರ್ಣವಾಗಿ ಜಯಂತಿ ಆಚರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರ ಕುರಿತು ಉಪನ್ಯಾಸಕ ಡಾ.ಬಿ.ಎಂ.ಗುರುನಾಥ್ ಅವರಿಂದ ಉಪನ್ಯಾಸ ಏರ್ಪಡಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ತಹಶೀಲ್ದಾರ್ ಸತ್ಯನಾರಾಯಣ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

 

[t4b-ticker]

You May Also Like

More From Author

+ There are no comments

Add yours