ಜಿಲ್ಲೆಯಲ್ಲಿ 140 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 4,299ಕ್ಕೆ ಏರಿಕೆ

 

 

 

 

ಚಿತ್ರದುರ್ಗ, ಸೆಪ್ಟೆಂಬರ್10:
   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 140 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,299ಕ್ಕೆ ಏರಿಕೆಯಾದಂತಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.
 ಚಿತ್ರದುರ್ಗ ತಾಲ್ಲೂಕಿನಲ್ಲಿ 58, ಚಳ್ಳಕೆರೆ 36, ಹಿರಿಯೂರು 19, ಹೊಸದುರ್ಗ 21, ಮೊಳಕಾಲ್ಮುರು 04 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 02 ಸೇರಿದಂತೆ ಒಟ್ಟು 140 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
 ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 92 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 770 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 140 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 4,299ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 2,876 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,388  ಸಕ್ರಿಯ ಪ್ರಕರಣಗಳು ಇವೆ.
  ಸದ್ಯ ಜಿಲ್ಲೆಯಲ್ಲಿ ಒಟ್ಟು 922 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 32,589  ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

 

 

  ಈವರೆಗೆ 46,341 ಜನರ ಮಾದರಿ ಸಂಗ್ರಹಿಸಲಾಗಿದ್ದು, 40,264 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1,336 ಜನರ ವರದಿ ಬರುವುದು ಬಾಕಿ ಇದೆ. 442 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours