ಕೋಟೆ ನಾಡಲ್ಲಿ ಕಣ್ಮನ ಸೆಳೆಯುತ್ತಿರುವ ಫಲ ಪುಷ್ಪ ಪ್ರದರ್ಶನ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.10:chitradurga ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಕೃಷಿ ಇಲಾಖೆಯಿಂದ ನಗರದ ವಿ.ಪಿ.ಬಡಾವಣೆಯ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಆಯೋಜಿಸಿರುವ ಮೂರು ದಿನಗಳ ಫಲ-ಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಸಂಜೆ ಚಾಲನೆ ದೊರೆಯಿತು.

 

 

 

ಫೆ.10 ರಿಂದ ಫೆ.12 ರವರೆಗೆ ಹಮ್ಮಿಕೊಂಡಿರುವ 30ನೇ ಫಲ-ಪುಷ್ಪ ಪ್ರದರ್ಶನವನ್ನು ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ, ಉದ್ಘಾಟಿಸಿದರು.
ಫಲ-ಪುಷ್ಪ ಪ್ರದರ್ಶನದಲ್ಲಿರುವ ವಿವಿಧ ಜಾತಿಯ ಹೂ, ಹಣ್ಣು, ತರಕಾರಿಗಳನ್ನು ಹಾಗೂ ವಿವಿಧ ರೀತಿಯ ಕಲಾಕೃತಿಗಳನ್ನು ಹಾಗೂ ತೋಟಗಾರಿಕೆ, ಕೃಷಿ, ಪಶು ಇಲಾಖೆ ಹಾಗೂ ಅರಣ್ಯ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಯ ವಸ್ತು ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಚಿತ್ರದುರ್ಗದ ನಗರದ ಐತಿಹಾಸಿಕ ಗಾಳಿ ಗೋಪುರ ಮತ್ತು ಉಯ್ಯಾಲೆ ಕಂಬ, ಗಂಧದ ಗುಡಿ ಹಾಗೂ ಕಾಂತಾರ ಚಲನಚಿತ್ರದ ಕಲಾಕೃತಿಗಳು, ಆದರ್ಶ ಸಂತ ಸಿದ್ದೇಶ್ವರ ಸ್ವಾಮೀಜಿ, ತರಕಾರಿ ಮನೆ ಹಾಗೂ ಹಳ್ಳಿಯ ಸೊಗಡು, ಮತದಾನ ಜಾಗೃತಿ ಕುರಿತು ಕಲಾಕೃತಿಗಳು ಈ ಬಾರಿಯ ಫಲ-ಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆಯಾಗಿ ಜನಮನ ಸೂರೆಗೊಳ್ಳುತ್ತಿವೆ.


ಎರಡು ವರ್ಷಗಳ ನಂತರ ಆಯೋಜಿಸಲಾಗಿರುವ ಫಲ-ಪುಷ್ಪ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಕುಟಂಬ ಸಮೇತರಾಗಿ ಆಗಮಿಸಿ, ಹೂಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಹಣ್ಣು ಮತ್ತು ತರಕಾರಿ ತೆಂಗಿನ ಚಿಪ್ಪಿನ ಕೆತ್ತನೆಯ ಕಲಾಕೃತಿಗಳನ್ನು ವೀಕ್ಷಿಸಿ, ವಿವಿಧ ಬಗೆಯ ತಿಂಡಿತಿನಿಸುಗಳನ್ನು ಸವಿದು ಸಾರ್ವಜನಿಕರು ಆನಂದಿಸುತ್ತಿರುವುದು ಕಂಡುಬಂತು.
ಈ ಸಂದರ್ಭದಲ್ಲಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ, ಜಿಲ್ಲಾ ತೋಟಗಾರಿಕೆ ಸಂಘದ ಉಪಾಧ್ಯಕ್ಷ ಸುಜಯ್ ಪ್ರಕಾಶ್, ತೋಟಗಾರಿಕೆ ಉಪನಿರ್ದೇಶಕಿ ಜಿ.ಸವಿತಾ, ತೋಟಗಾರಿಕೆ ಸಹಾಯಕ ನಿರ್ದೇಶಕಿ  ದೀಪಾ ಸೇರಿದಂತೆ ಮತ್ತಿತರರು ಇದ್ದರು.
ಫೋಟೋ ವಿವರ:  ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಆಯೋಜಿಸಿರುವ 30ನೇ ಫಲ-ಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಸಂಜೆ ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ ಚಾಲನೆ ನೀಡಿದರು.

[t4b-ticker]

You May Also Like

More From Author

+ There are no comments

Add yours