ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ವದಂತಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸ್ಪಷ್ಟವಾಗಿ ನಿರಾಕರಿಸಿದೆ. ಇಂತಹ ವರದಿಗಳು ಅವೈಜ್ಞಾನಿಕ ಮತ್ತು ಆಧಾರರಹಿತವಾಗಿದ್ದು, ಯಾರು ನಂಬಬಾರದು ಎಂದು ಹೇಳಿದೆ. ಆ ಮೂಲಕ ಎಲ್ಲಾ ಗೊಂದಲಗಳಿಗೆ ಪ್ರಾಧಿಕಾರ ತೆರೆ ಎಳೆದಿದೆ.
ಈ ಕುರಿತಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಶನಿವಾರ ಮಾಧ್ಯಮ ಪ್ರಕರಣೆ ಹೊರಡಿಸಿದ್ದು, ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳು ಅವೈಜ್ಞಾನಿಕವಾಗಿದ್ದು, ದಾರಿತಪ್ಪಿಸುವ ಮೂಲಕ ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಉಂಟು ಮಾಡುತ್ತಿದ್ದು, ಅಂತಹ ವರದಿಗಳನ್ನು ನಂಬದಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹೇಳಿದೆ.





