ಪಡಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪಂಚಾಯತ್ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮವು ಪಡಂಗಡಿಯ ಗಣಪತಿ ಸಭಾಭವನದಲ್ಲಿ ನಡೆಯಿತು.
ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ, ಉಪಾಧ್ಯಕ್ಷೆ ವಸಂತಿ, ಪಂ. ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಪಂ. ಸದಸ್ಯರಾದ ಸಂತೋಷ್ ಕುಮಾರ್ ಜೈನ್ ಸ್ವಾಗತಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ಸಫನಾ ಹಾಗೂ ಕಾರ್ಯದರ್ಶಿ ಗಣೇಶ್ ಕಾರ್ಯಕ್ರಮ ನಿರ್ವಹಿಸಿದರು.





