ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮನೋಹರ ಬಳಂಜ, ಕಾರ್ಯದರ್ಶಿ ಸ್ಥಾನಕ್ಕೆ ಅರವಿಂದ ಹೆಬ್ಬಾರ್, ಉಪಾಧ್ಯಕ್ಷ ಸ್ಥಾನಕ್ಕೆ ಶಿಬಿ ಧರ್ಮಸ್ಥಳ, ಕೋಶಾಧಿಕಾರಿ ಸ್ಥಾನಕ್ಕೆ ಗಣೇಶ್ ಬಿ. ಶಿರ್ಲಾಲು ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನಗಳಿಗೆ ಪ್ರಸಾದ್ ಶೆಟ್ಟಿ, ಬಿ.ಎಸ್. ಕುಲಾಲ್, ಮಂಜುನಾಥ ರೈ ಎನ್., ಪುಷ್ಪರಾಜ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.





