ಸಿದ್ದೇಶ್ ಯಾದವ್ ನಿಧನಕ್ಕೆ ನಳಿನ್ಕುಮಾರ್ ಕಟೀಲ್ ಸಂತಾಪ
‘ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸಿದ್ದರು. ಈ ಹಿಂದೆ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾಗಿ ಅವರು ಬಿಜೆಪಿಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇರಿದಂತೆ ಪರಿವಾರದ ಸಂಘಟನೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ವ್ಯಕ್ತಿಯಾಗಿದ್ದು, ಅವರ ನಿಧನ ಅತ್ಯಂತ ನೋವು ತಂದಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪಕ್ಷದ ಚಟುವಟಿಕೆಗಳಲ್ಲಿ ಸದಾ ಹಸನ್ಮುಖಿಯಾಗಿ, ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಬಿಜೆಪಿ ಬಳ್ಳಾರಿ ವಿಭಾಗದ ಪ್ರಭಾರಿಗಳಾದ ಶ್ರೀ ಸಿದ್ದೇಶ್ ಯಾದವ್ ಅವರ ಅಕಾಲಿಕ ಸಾವಿನ ಸುದ್ದಿ ತಿಳಿದು ಮನಸ್ಸು ಭಾರವಾಗಿದೆ.
ಆ ಭಗವಂತ ಶ್ರೀಯುತರ ಆತ್ಮಕ್ಕೆ ಸದ್ಗತಿ ನೀಡಲಿ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
[t4b-ticker]
+ There are no comments
Add yours