ಶ್ರೀಲಂಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ ಭರ್ಜರಿ ಕಂಬ್ಯಾಕ್ ಮಾಡಿ, ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 10,000 ರನ್ಗಳ ಗಡಿ ದಾಟಿದ್ದಾರೆ. ಮಿಥಾಲಿ ರಾಜ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಮಹಿಳಾ ಕ್ರಿಕೆಟರ್ ಇವರಾಗಿದ್ದಾರೆ. ಆರಂಭಿಕ ಪಂದ್ಯಗಳಲ್ಲಿ ರನ್ ಬರ ಎದುರಿಸಿದ್ದ ಸ್ಮೃತಿ, ಈ ಐತಿಹಾಸಿಕ ಮೈಲಿಗಲ್ಲನ್ನು ತಲುಪಿ ಭಾರತೀಯ ಮಹಿಳಾ ಕ್ರಿಕೆಟ್ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.
ತಿರುವನಂತಪುರದಲ್ಲಿ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ 27 ರನ್ಗಳ ಗಡಿ ದಾಟುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 10000 ರನ್ಗಳ ಗಡಿ ದಾಟಿದ್ದಾರೆ. ಈ ಮೂಲಕ ಭಾರತದ ಪರ ಈ ಸಾಧನೆ ಮಾಡಿದ ಎರಡನೇ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ. ಸ್ಮೃತಿಗೂ ಮೊದಲು ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಈ ಸಾಧನೆ ಮಾಡಿದ್ದರು.






