ಬೆಳ್ತಂಗಡಿ: ಮೂಲ್ಯರ ಯಾನೆ ಕುಲಾಲರ ಸಂಘ (ರಿ.) ಅರಸಿನಮಕ್ಕಿ ಇದರ ೩೧ನೇ ವರ್ಷದ ವಾರ್ಷಿಕೋತ್ಸವ, ಸನ್ಮಾನ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮವು ಜ. 11ರಂದು ಬೆಳಿಗ್ಗೆ 10 ಗಂಟೆಯಿಂದ ಅರಸಿನಮಕ್ಕಿಯ ಕುಂಭಶ್ರೀ ವೇದಿಕೆಯಲ್ಲಿ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಅರಸಿನಮಕ್ಕಿ ಕುಲಾಲ ಸಂಘದ ಅಧ್ಯಕ್ಷರಾದ ಕೆ. ಗಂಗಾಧರ ಕುಲಾಲ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಹಿರಿಯ ವೈದ್ಯ ಡಾ. ಮೋಹನದಾಸ ಕೊಕ್ಕಡ ಅವರಿಗೆ ಸನ್ಮಾನ ಕಾರ್ಯಕ್ರಮವಿದೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.





