ಇಷ್ಟ ಇದ್ದರೆ ಕೆಲಸ ಮಾಡಿ ಇಲ್ಲಾಂದ್ರೆ ನಿಮ್ಮ ದಾರಿ ನೋಡಿಕೊಳ್ಳಿ:ಶಾಸಕ ಟಿ.ರಘುಮೂರ್ತಿ ವಾರ್ನಿಂಗ್

 

 

 

 

ಜನಸಂಪರ್ಕ ಸಭೆ ಹೈಲೆಟ್ಸ್ :
*14 ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನ ಸಂಪರ್ಕ ಸಭೆಗಳು ಮುಕ್ತಾಯ
* ಚಳ್ಳಕೆರೆ ನಗರದಲ್ಲಿ ಎರಡನೇ ಬಾರಿ ಜನಸಂಪರ್ಕ ಸಭೆ ಮೂಲಕ‌ ಜನರಿಗೆ ಪರಿಹಾರ.
* ಜಿಲ್ಲಾ ಮಟ್ಟದ ಅಧಿಕಾರಿಗಳ ಕರೆಸಿ ಹೆಚ್ಚಿನ ಸಮಸ್ಯೆಗಳಿಗೆ ಪರಿಹಾರ

ಚಳ್ಳಕೆರೆ:   ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಕುರಿತು ಅಧಿಕಾರಿಗಳ ಹಂತದ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಮತ್ತು ಸರ್ಕಾರ ಹಾಗೂ ಜನಪ್ರತಿನಿಧಿಗಳ ಆಡಳಿತ ಯಂತ್ರಕ್ಕೆ ಚುರುಕು ಮಾಡಲು ಜನಸಂಪರ್ಕ ಸಭೆಯನ್ನು ನಡೆಸಲಾಗುತ್ತಿದ್ದು ಅಧಿಕಾರಿ ವರ್ಗ ಜನಸಂಪರ್ಕ ಸಭೆಯನ್ನು ಗಂಭೀರವಾಗಿ ಪರಿಗಣಿಸಬೇಕು ಅದು ಎಲ್ಲಾ ಸಭೆಯಂತೆ ಅಲ್ಲ ಅಲ್ಲಿ ಸಮಸ್ಯೆ ಒತ್ತು ಬರುವ ಜನರಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಿದ್ದವಾಗಿ ಬರಬೇಕು ಎಂದು ಶಾಸಕ( mla) ಟಿ.ರಘುಮೂರ್ತಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡುವ ಮೂಲಕ ಬಿಸಿಮುಟ್ಟಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯನ್ನು ಗಿಡಕ್ಕೆ ನೀಡಿ ಎರೆಯುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾನು ಮೂರನೇ ಬಾರಿಗೆ ಈ ಕ್ಷೇತ್ರದ ಶಾಸಕನಾದ ನಂತರ 20 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 14 ಗ್ರಾಮ ಪಂಚಾಯಿತಿಯಲ್ಲಿ ಈಗಾಗಲೇ ಜನಸಂಪರ್ಕ ಸಭೆಯನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ. ನಗರದ ಮಟ್ಟದಲ್ಲಿ ಎರಡನೆ ಬಾರಿ ಸಭೆ ನಡೆಸಿ ನಗರದ ನಾಗರಿಕರ ಸಮಸ್ಯೆಗೆ ಪರಿಹಾರ ನೀಡುವ ಕೆಲಸ‌ ಮಾಡಲಾಗುತ್ತಿದೆ.

ಸಾರ್ವಜನಿಕರು ಮತ್ತು ಆಡಳಿತದ ನಡುವೆ ಹೆಚ್ಚು ಆತ್ಮವಿಶ್ವಾಸ ಮೂಡಿಸಲು ಜನಸಂಪರ್ಕ ಸಭೆಯು ಇಬ್ಬರ ನಡುವಿನ ಸೇತುವೆಯಾಗಿದೆ. ಸಾರ್ವಜನಿಕರೂ ಸಹ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ತಿಳಿಸಿ ಪರಿಹಾರ ಕಂಡುಕೊಳ್ಳಬೇಕು. ಕೆಲವೊಂದು ಸಂದರ್ಭಗಳಲ್ಲಿ ಕೆಲವು ಸಮಸ್ಯೆ ಇಲ್ಲೇ ಪರಿಹಾರ ಒದಗಿಸುತ್ತೇನೆ. ಕೆಲವು ಸಮಸ್ಯೆಗಳಿಗೆ ಪರಿಹಾರ ನೀಡಲು ಕಾನೂನು ತೊಡಕು ಇರುತ್ತವೆ. ಸರ್ಕಾರ ಮಟ್ಟದಲ್ಲೂ ಸಹ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕರೆಸಿ ಜನಸಂಪರ್ಕ ಸಭೆ ನಡೆಸಿ ಜನರ ಸಮಸ್ಯೆಗೆಳಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸ್ಪಂದಿಸುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರ ಈಗಾಗಲೇ ಈ ಕ್ಷೇತ್ರವನ್ನು ಬರಗಾಲ ಪೀಡಿತವೆಂದು ಘೋಷಿಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯಿತಿ, ಕೃಷಿ,ತೋಟಗಾರಿಕೆ ಇಲಾಖೆ ಅಧಿಕಾರಿಗಳು ಎನ್‌ಆರ್‌ಇಜಿ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು ಸೃಷ್ಠಿಸಿ ಬಡ ಜನರಿಗೆ ಕೂಲಿ ನೀಡಬೇಕು.

 

 

ಮಳೆ ವೈಪಲ್ಯದಿಂದ ಸಂಪೂರ್ಣ ಬೆಳೆ ನಾಶವಾಗಿದ್ದು, ರೈತರಿಗೆ ಬೆಳೆ ಪರಿಹಾರ ಇನ್ನೂ ಕೈಸೇರಿಲ್ಲ. ನಿಟ್ಟಿನಲ್ಲಿ ಅಧಿಕಾರಿ ವರ್ಗ ಹಿರಿಯ ಅಧಿಕಾರಿಗಳೊಂದಿಗೆ ಸಕರಾತ್ಮಕವಾಗಿ ಚರ್ಚಿಸಿ ಪರಿಹಾರ ಒದಗಿಸುವಲ್ಲಿ ಮುಂದಾಗಬೇಕು ಎಂದರು.

ಪ್ರಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಹರಿಪ್ರಸಾದ್ ಮಾಹಿತಿ ನೀಡಿ, ಇದುವರೆಗೂ ಸರ್ಕಾರ ಜನಪ್ರಿಯ ಯೋಜನೆಯಾದ ಗೃಹಲಕ್ಷಿö್ಮ ಯೋಜನೆಯಡಿ ತಾಲ್ಲೂಕಿನಾದ್ಯಂತ ಒಟ್ಟು ೭೯೭೧೭ ಜನ ನೊಂದಾವಣೆಯಾಗಿದ್ದು, ಆ ಪೈಕಿ ೭೪೮೧೯ ಫಲಾನುಭವಿಗಳಿಗೆ ಹಣ ಈಗಾಗಲೇ ಅವರ ಖಾತೆಗೆ ಜಮಾ ಮಾಡಲಾಗಿದೆ. ಶೇ.೯೩ರ ಸಾಧನೆ ದಾಖಲಿಸಲಾಗಿದೆ ಎಂದರು. ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ಕಡ್ಡಾಯವಾಗಿ ಪೂರ್ಣಪ್ರಮಾಣದಲ್ಲಿ ನಿಯಂತ್ರಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪಿ.ಮಹದೇವಪುರದ ನೂರಾರು ರೈತರು ಕಳೆದ ೨೦೨೧-೨೨ನೇ ಸಾಲಿನ ಬೆಳೆ ವಿಮೆ ಹಾಗೂ ಬೆಳೆಪರಿಹಾರದ ಹಣ ನಮಗೆ ಇನ್ನೂ ದೊರಕಿಲ್ಲ, ಎರಡಲ್ಲೂ ಹಿಂದಿನ ಅಧಿಕಾರಿಗಳು ರೈತರನ್ನು ವಂಚಿಸಿ ಲಕ್ಷಾಂತರ ರೂಪಾಯಿ ರೈತರ ಪರಿಹಾರ ಹಣವನ್ನು ದೋಚಿದ್ಧಾರೆ. ಈ ಬಗ್ಗೆ ಕ್ರಮ ಜರುಗಿಸುವ ಬಗ್ಗೆ ರೈತರು ಪ್ರಶ್ನಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜೆ.ಅಶೋಕ್, ತಹಶೀಲ್ಧಾರ್ ರೇಹಾನ್ ಪಾಷ, ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪನವರನ್ನು ಪ್ರಶ್ನಿಸಿದಾಗ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದು ಈಗಾಗಲೇ ತನಿಖಾ ತಂಡ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದೆ ಎಂದರು.

ಇದಕ್ಕೆ ಸಂಬಂಧಿಸಿದಂತೆ ಕೂಡಲೇ ಶಾಸಕರು ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದಾಗ ಜಿಲ್ಲಾಧಿಕಾರಿಗಳು ಕೃಷಿ ಇಲಾಖೆ ಕಮಿಷನ್‌ರವರಿಗೆ ವರದಿ ನೀಡಿದೆ ಎಂದರು. ಕಮಿಷನರವರನ್ನು ಸಂಪರ್ಕಿಸಿದಾಗ ಶೀಘ್ರದಲ್ಲೇ ಕ್ರಮ ಜರುಗಿಸುವ ಭರವಸೆ ನೀಡಿದರು. ತಾಲ್ಲೂಕಿನಾದ್ಯಂತ ಕೆಲವೊಂದು ಶಾಲೆಗಳ ಕಟ್ಟಡ ಶಿಥಿಲಗೊಂಡಿದ್ದು ತುರ್ತು ರಿಪೇರಿ ಮಾಡಿಸಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದಾಗ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದ ಶಾಸಕರು ಶೀಘ್ರದಲ್ಲೇ ಸುಮಾರು ೮ ಲಕ್ಷ ಹಣ ಶಾಲಾ ರಿಪೇರಿಗೆ ಬಿಡುಗಡೆಯಾಗಲಿದ್ದು, ಅವಶ್ಯವಿರುವ ಕಡೆ ರಿಪೇರಿ ಮಾಡಿಸಿ ಕಟ್ಟಡ ಶಿಥಿಲಗೊಂಡಿದ್ದರೆ ಅದನ್ನು ಸಂಪೂರ್ಣ ನೆಲಸಮ ಮಾಡಿ ಎಂದರು.

ಇದನ್ನೂ ಓದಿ: ಡಾ.ಸೌಮ್ಯ ಮಂಜುನಾಥಸ್ವಾಮಿ ಅವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ, ರಸ್ತೆ, ಕುಡಿಯುವ ನೀರು, ಮುಂತಾದ ಮೂಲಭೂತ ಸೌಕರ್ಯಗಳ ಬಗ್ಗೆ ಜನರು ಮನವಿ ನೀಡಿದರು. ಜನಸಂಪರ್ಕ ಸಭೆಯಲ್ಲಿ ಸುಮಾರು ೨೦೦ಕ್ಕೂ ಹೆಚ್ಚು ಅರ್ಜಿಗಳ ಸಲ್ಲಿಕೆಯಾಗಿದ್ದು, ಅವುಗಳನ್ನು ಇಲಾಖೆವಹಿ ಪ್ರತ್ಯೇಕಗೊಳಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ತಿಮ್ಮಪ್ಪ ಮಾಹಿತಿ ನೀಡಿ, ಚಿತ್ರದುರ್ಗ ಜಿಲ್ಲೆಗೆ ಎನ್‌ಆರ್‌ಇಜಿ ಯೋಜನೆಯಡಿ ಸುಮಾರು ೩೦೦ ಕೋಟಿ ಹಣ ಬರಬೇಕಿದೆ ಎಂದರು. ಗ್ರಾಮೀಣ ಭಾಗದಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಎನ್‌ಆರ್‌ಇಜಿ ಯೋಜನೆಯಡಿ ಹೆಚ್ಚು ಕಾಮಗಾರಿಗಳನ್ನುಅನುಷ್ಠಾಗೊಳಿಸುವಂತೆ ಶಾಸಕರು ಸೂಚಿಸಿದರು.
ವೇದಿಕೆಯಲ್ಲಿ ತಹಶೀಲ್ಧಾರ್ ರೇಹಾನ್‌ಪಾಷ, ಪೌರಾಯುಕ್ತ ಸಿ.ಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ, ನಗರಸಭೆ ಸದಸ್ಯರಾದ ಮಲ್ಲಿಕಾರ್ಜುನ್, ಪ್ರಕಾಶ್, ವೀರಭದ್ರಪ್ಪ, ಸಾಹಿತಿ ತಿಪ್ಪಣ್ಣಮರಿಕುಂಟೆ,ಇ ದಯಾನಂದಸ್ವಾಮಿ, ತಿಪ್ಪೇಸ್ವಾಮಿ, ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ, ಬಿಸಿಎಂ ಅಧಿಕಾರಿ ದಿವಾಕರ, ಎಸ್ಟಿ ಕಲ್ಯಾಣಾಧಿಕಾರಿ ಶಿವರಾಜ್ ಮುಂತಾದವರು ಇದ್ದರು.

 

ಬಾಕ್ಸ್ :
ಗ್ರಾಮೀಣ ಮತ್ತು ನಗರ ಸಮಸ್ಯೆಗಳಿಗೆ ಅಧಿಕಾರಿಗಳು ಧ್ವನಿಯಾಗಿ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸದೇ ನಿರಂತರ ಕಚೇರಿ ಅಲೆದಾಡಿಸಿದರೆ ನಾನು ಸಹಿಸಲ್ಲ. ಎಲ್ಲಾ ಸಮಸ್ಯೆಗಳಿಗೆ ಜನಸಂಪರ್ಕ ಸಭೆಗೆ ಬರುವ ತನಕ ಕಾಯದೇ ಜನರ ಸಮಸ್ಯೆಗ ಪರಿಹಾರ ನೀಡಬೇಕು. ಜನ ಸಂಪರ್ಕ ಸಭೆ ಗಂಭೀರತೆ ಅರಿತು ಕೆಲಸ ಮಾಡಿ, ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಮುಂದಿನ ದಿನದಲ್ಲಿ ಮುಲಾಜಿಲ್ಲದೇ ಕಾನೂನು ಕ್ರಮ ಜರುಗಿಸಲಾಗುತ್ತದೆ.
ಟಿ.ರಘುಮೂರ್ತಿ
ಶಾಸಕರು ಚಳ್ಳಕೆರೆ

[t4b-ticker]

You May Also Like

More From Author

+ There are no comments

Add yours