ನವದೆಹಲಿ, ಜ.1: ಹೊಸ ವರ್ಷಕ್ಕೆ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯ ಶಾಕ್ ಸಿಕ್ಕಿದೆ.
2025ರಲ್ಲಿ 200 ರೂ.ಗೂ ಹೆಚ್ಚು ಇಳಿಕೆ ಕಂಡಿದ್ದ ಕಮರ್ಷಿಯಲ್ ಎಲ್ಪಿಜಿ ಗ್ಯಾಸ್ ಬೆಲೆ ಏರಿಕೆ ಆಗಿದೆ. ಆದರೆ, ಗೃಹಬಳಕೆ ಗ್ಯಾಸ್ ಬೆಲೆಯಲ್ಲಿ ಏರಿಕೆ ಆಗಿಲ್ಲ. 19 ಕಿಲೋ ಮತ್ತು 47.50 ಕಿಲೋ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ಗಳು ದುಬಾರಿಯಾಗಿವೆ. 19 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 110 ರೂನಿಂದ 112 ರೂನಷ್ಟು ಏರಿದೆ. ಬೆಂಗಳೂರಿನಲ್ಲಿ 110.50 ರೂ ಬೆಲೆ ಹೆಚ್ಚಳ ಆಗಿದೆ. ಇನ್ನು, 47.50 ಕಿಲೋ ತೂಕದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 274.50 ರೂ ಏರಿಕೆ ಆಗಿದ್ದು, 4,407 ರೂ ಗಡಿ ಮುಟ್ಟಿದೆ.
ಕಮರ್ಷಿಯಲ್ ಗ್ಯಾಸ್ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮದ ಮೇಲೆ ಪರಿಣಾಮ ಬೀರುತ್ತದೆ. ಅಡುಗೆ ವೆಚ್ಚ ಏರಿಕೆಯಾಗಿ, ಅಂತಿಮವಾಗಿ ಗ್ರಾಹಕರಿಗೆ ಊಟದ ಬಿಲ್ನಲ್ಲಿ ಏರಿಕೆ ಆಗುತ್ತದೆ.






