ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಎದುರಿಸುತ್ತಿರುವ ಅಶ್ಲೀಲ ಕಮೆಂಟ್ಗಳು ಮತ್ತು ಮೆಸೇಜ್ಗಳ ವಿರುದ್ಧ ಈಗ ಸಿಟ್ಟಿಗೆದ್ದಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ನೀಡಿದ ದೂರಿನನ್ವಯ ಇಬ್ಬರನ್ನು ಬಂಧಿಸಲಾಗಿದೆ. ಐಪಿ ಅಡ್ರೆಸ್ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಲಾಗಿದ್ದು, ಇಂತಹ ಸೈಬರ್ ಕಿರುಕುಳಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶವನ್ನು ಇದು ನೀಡಿದೆ.
ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ಗಳು ಬಂದಿದ್ದವು. ಇದರ ವಿರುದ್ಧ ಅವರು ಪೊಲೀಸರಿಗೆ ದೂರು ನೀಡಿದ್ದರು. ‘ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಆರೋಪಿಸಿದ್ದರು.ಈ ಬೆನ್ನಲ್ಲೇ ಇಬ್ಬರ ಬಂಧನ ನಡೆದಿದೆ.
ಬೆಂಗಳೂರಿನ ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು ಹಾಗೂ ದಾವಣಗೆರೆ ಮೂಲದ ಇಂಜಿನಿಯರ್ ನಿತಿನ್ ಬಂಧಿತರು. ಇಬ್ಬರೂ ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ನಿಂದಿಸಿದ್ದರು. ಇವರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.





