ಜಿಲ್ಲೆಯ ಅಭಿವೃದ್ದಿಗಾಗಿ ಸ್ಥಳೀಯರಿಗೆ ಎಂಪಿ ಟಿಕೆಟ್ ನೀಡಲಿ:ಎಂ.ಸಿ.ರಘುಚಂದನ್

 

 

 

 

ಟಿಕೆಟ್ ನೀಡಿದರೆ ಚಿತ್ರದುರ್ಗದಿಂದ ಸ್ಪರ್ಧೆ

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ (Chitradurga Lok Sabha)ಹೊರಗಿನಿಂದ ಬಂದವರಿಗೆ ಹೆಚ್ಚು ಮಣೆ ಹಾಕುವ ಊರಾಗಿದೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಸ್ಥಳೀಯರು ಬರಬೇಕು. ನಾನು ಸ್ಥಳೀಯನಾಗಿರುವುದರಿಂದ ಇಲ್ಲಿನ ಸಮಸ್ಯೆಗಳು ಚೆನ್ನಾಗಿ ತಿಳಿದಿವೆ. ಹಾಗಾಗಿ ಸ್ಥಳೀಯರಿಗೆ ಟಿಕೆಟ್ ಕೊಟ್ಟರೆ ಹೆಚ್ಚು ಅನುಕೂಲವಾಗಲಿದೆ ಎಂದು ದೇವರಾಜ್ ಅರಸು ಶಿಕ್ಷಣ ಸಂಸ್ಥೆಯ ಸಿಇಓ ಎಂ.ಸಿ.ರಘುಚಂದನ್ ತಿಳಿಸಿದ್ದಾರೆ.

ಕಾಂಗ್ರೆಸ್ ಅಥವಾ ಬಿಜೆಪಿ ರಾಷ್ಟ್ರೀಯ ಪಕ್ಷಗಳಾಗಿರುವುದರಿಂದ ಬೇರೆ ಬೇರೆ ಲೆಕ್ಕಾಚಾರದಲ್ಲಿ ಟಿಕೆಟ್ ನೀಡುವುದು ಇದ್ದೇ ಇರುತ್ತದೆ. ಎರಡು ಪಕ್ಷಗಳಿಗೆ ಹೈಕಮಾಂಡ್ ಇದೆ.ಹೈಕಮಾಂಡ್ ತಿರ್ಮಾನ ಅಂತಿಮವಾಗಿರುತ್ತದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಪಕ್ಷದ ಬಿಜೆಪಿ ಪಕ್ಷದಿಂದ ಟಿಕೇಟ್ ಕೇಳದ್ದೆ. ಆದರೆ, ವಯಸ್ಸಿನ ಅಂತರದ ಕಾರಣಕ್ಕೆ ಹಿಂದೆ ಸರಿಯಲಾಗಿತ್ತು. ಈಗ ಮತ್ತೆ ಲೋಕಸಭೆಗೆ ಚುನಾವಣೆ ಹತ್ತಿರವಾಗುತ್ತಿದೆ. ಈಗಾಗಲೇ ಪಕ್ಷದ ವರಿಷ್ಠರ ವಲಯದಲ್ಲಿ ಒಂದು ಸುತ್ತಿನ ಮಾತುಕತೆ ನಡೆಸಿದ್ದು ಎಲ್ಲಾರಿಂದ ಉತ್ತಮ ಸ್ಪಂದನೆ ದೊರಕಿದೆ.

ಸಮೀಕ್ಷೆ ಆಧಾರದಲ್ಲೇ ನಮ್ಮ ಪಕ್ಷದ ಟಿಕೆಟ್, ನಾನು ಕೂಡ ಆಕಾಂಕ್ಷಿ ಎಂದು ವರಿಷ್ಠರ ಬಳಿ ಹೇಳಿದ್ದೇನೆ. ಸಂವಿಧಾನದಲ್ಲಿ ಯಾರು ಬೇಕಾದರೂ ಸ್ಪರ್ಧಿಸಲು ಅವಕಾಶ ಮಾಡಿಕೊಡುತ್ತಾರೆ ಎಂಬ ವಿಶ್ವಾಸ ಇಟ್ಟಿದ್ದೇನೆ. ಒಂದು ವೇಳೆ ನಮಗೆ ಟಿಕೆಟ್ ಸಿಕ್ಕಿದರೆ ಎಲ್ಲಾ ಕಡೆ ಸಂಘಟಿಸಿ ಕ್ಷೇತ್ರ ಸುತ್ತಾಡಿ ಚುನಾವಣೆ ನಡೆಸುತ್ತೇವೆ. ಎ.ನಾರಾಯಣಸ್ವಾಮಿ ಅಥವಾ ಬೇರೆ ಯಾರಿಗೆ ಕೊಟ್ಟರೂ ಹೊಳಲ್ಕೆರೆ. ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

 

 

ನಾವು ಏನೇ ಹೇಳಿದರೂ ಸಹ ನಮ್ಮದು ಅಂತಿಮವಾಗಿ ಹೈಕಮಾಂಡ್ ತಿರ್ಮಾನ ಮಾಡುತ್ತದೆ. ನಮ್ಮದ ಶಿಸ್ತಿನ ಪಕ್ಷ ಯಾರಿಗೇ ಟಿಕೇಟ್ ಕೊಟ್ಟರೂ ಕೆಲಸ ಮಾಡುತ್ತೇವೆ. ಸಂಸದೀಯ ಮಂಡಳಿಯಲ್ಲಿ ತೀರ್ಮಾನ ಮಾಡಿ ಟಿಕೆಟ್ ನೀಡುವುದು ನಮ್ಮ ಪಕ್ಷದ ಪದ್ಧತಿ. ಅಲ್ಲಿಯ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ಎನ್ನುವುದು ಒಂದು ರೀತಿಯಲ್ಲಿ ಲಾಡ್ಜ್ ರೀತಿಯಲ್ಲಿ ಆಗಿದೆ. ಇಲ್ಲಿ ಯಾರ ಬೇಕಾದರು ಬಂದು ಚುನಾವಣೆಯಲ್ಲಿ ನಿಲ್ಲಬಹುದಾಗಿದೆ. ಮತದಾರರು ಸಹಾ ಹೊರಗಿನವರಿಗೆ ಮತವನ್ನು ನೀಡುವುದರ ಮೂಲಕ ಗೆಲ್ಲಿಸುತ್ತಾರೆ. ಸ್ಥಳಿಯವಾಗಿ ಇರುವವರಿಗೆ ಪ್ರಾತಿನಿಧ್ಯ ನೀಡಿದರೆ ಮಾತ್ರ ಸ್ಥಳಿಯವಾಗಿ ಇರುವ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯವಿದೆ. ಈ ಹಿನ್ನಲೆಯಲ್ಲಿ ನಾನು ಸಹಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂಬ ಆಸೆಯನ್ನು ಹೊಂದಿದ್ದೇನೆ. ಪಕ್ಷದ ಹೈಕಮಾಂಡ್ ಯಾವ ರೀತಿ ತೀರ್ಮಾನ ಮಾಡುತ್ತದೆ ಅದರಂತೆ ನಡೆಯಲಾಗುವುದೆಂದು ಹೇಳಿದರು..

ಇದನ್ನೂ ಓದಿ: ಸರ್ಕಾರಿ ಐಬಿಯಲ್ಲಿ ಇಸ್ಪೀಟ್ ಆಡುತ್ತಿದ್ದ ನಗರಸಭೆ ಸದಸ್ಯ ಸೇರಿ 14 ಜನ‌ ಅರೆಸ್ಟ್

ಕಳೆದ ಲೋಕಸಭೆ ಚುನಾವಣೆ ವೇಳೆ ಎ.ನಾರಾಯಣಸ್ವಾಮಿ ಅವರನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಪಕ್ಷ ಸೂಚನೆ ಕೊಟ್ಟಿತ್ತು. 2018ರ ವಿಧಾನಸಭೆ ಚುನಾವಣೆಯಲ್ಲಿ ಹೊಳಲ್ಕೆರೆ ಕ್ಷೇತ್ರದಲ್ಲಿ ನಮ್ಮ ತಂದೆ ಎಂ.ಚಂದ್ರಪ್ಪ 40 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಎ.ನಾರಾಯಣಸ್ವಾಮಿ ಅವರನ್ನೂ ಅಷ್ಟೇ ಅಷ್ಟೇ ಅಂತರದ ಮತಗಳನ್ನು ಕೊಡಿಸಿದ್ದೇವೆ ಎಂದು ಈಗಾಗಲೇ ಚಿತ್ರದುರ್ಗ ಲೋಕಸಭೆ ಕ್ಷೇತ್ರ ಕುರಿತು ಪಕ್ಷದಿಂದ ಮೂರು ಬಾರಿ ಸಮೀಕ್ಷೆ ನಡೆಸಲಾಗಿದರ ಎಂದರು.

ಬಾಕ್ಸ್
ಸಮೀಕ್ಷೆ ಆಧಾರದಲ್ಲೇ ನಮ್ಮ ಪಕ್ಷದಲ್ಲಿ ಟಿಕೇಟ್ ನೀಡುವುದು. ಹಾಗಾಗಿ ನಾನು ಕೂಡಾ ಆಕಾಂಕ್ಷಿ ಎಂದು ವರಿಷ್ಠರ ಬಳಿ ಹೇಳಿದ್ದೇನೆ. ” ಸಂವಿಧಾನದಲ್ಲಿ ಬೇಕಾದರೂ ಸರ್ಧಿಸಲು ಅವಕಾಶ ಇರುವುದರಿಂದ ಈ ಬೇಡಿಕೆ ಇಟ್ಟಿದ್ದೇನೆ ಒಂದು ವೇಳೆ ನಮಗೆ ಟಿಕೇಟ್ ಸಿಕ್ಕಿದರೆ ಇಡೀ ಕ್ಷೇತ್ರ ಸುತ್ತಾಡಿ ಚುನಾವಣೆ ನಡೆಸುತ್ತೇವೆ. ಅಥವಾ ಬೇರೆ ಯಾರಿಗೆ ಕೊಟ್ಟರೂ ಹೊಳಲ್ಕೆರೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ .

ಎಂ.ಸಿ.ರಘುಚಂದನ್
ಬಿಜೆಪಿಮುಖಂಡರು ಖಂಡರು
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ

[t4b-ticker]

You May Also Like

More From Author

+ There are no comments

Add yours