ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಎಲ್ಲಾ ಫೈನಲ್

 

 

 

 

ಕರ್ನಾಟಕ:ರಾಜ್ಯದಲ್ಲಿ ಚುನಾವಣೆ ಕಾವು ಏರುತ್ತಿದೆ. ಲೋಕಸಭೆ ಚುನಾವಣೆ ಸಮೀಪವಿದೆ.ಆದರೆ ಸ್ಥಳೀಯ ಸಂಸ್ಥೆಗಳಾದ    ಬಿಬಿಎಂಪಿ, ತಾಲೂಕು ಪಂಚಾಯತ  ಮತ್ತು ಜಿಲ್ಲಾ ಪಂಚಾಯತ್ ಸೇರಿ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಪ್ರಕ್ರಿಯೆಗಳನ್ನು ಮುಂದಿನ ಎರಡು ವಾರಗಳಲ್ಲಿ ಪೂರ್ಣಗೊಳಿಸುವುದಾಗಿ ಹೈಕೋರ್ಟ್ ಗೆ  ರಾಜ್ಯ ಸರ್ಕಾರ ಅಭಯ  ನೀಡಿದೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್( Karnataka Panchayat Raj)ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ಇಂದು ಮಧ್ಯಾಹ್ನದ ವೇಳೆಗೆ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಅಧಿಸೂಚನೆ ಪೂರ್ಣಗೊಳ್ಳಲಿದೆ. ಒಂದು ವಾರದಲ್ಲಿ ಮೀಸಲಾತಿ ಕರಡು ಅಧಿಸೂಚನೆ ಹೊರ ಬೀಳಲಿದೆ ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಕೋವಿಡ್ ಆರ್ಭಟ,ಪಾಸಿಟಿವ್ ಕೇಸ್ ಎಷ್ಟು ನೋಡಿ

 

 

ಇದಕ್ಕೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ಇರಲಿದೆ. ಆ ಬಳಿಕ ಸಂಬಂಧಿತ ಪ್ರಾಧಿಕಾರಗಳು ಎರಡು ವಾರಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲಿವೆ” ಎಂದು ಹೇಳಿದರು. ಇದಕ್ಕೆ ರಾಜ್ಯ ಚುನಾವಣಾ ಆಯೋಗ ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಎನ್ ಫಣೀಂದ್ರ ಆಕ್ಷೇಪಿಸಿದರು. ಸರ್ಕಾರದ ಹೇಳಿಕೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ನ್ಯಾ. ದೀಕ್ಷಿತ್ ಅವರು “ಎಜಿ ಸಾಂವಿಧಾನಿಕ ಫಂಕ್ಷನರಿ. ಅವರನ್ನು ನಂಬಬಾರದೇ? ಕ್ಷೇತ್ರ ಪುನರ್ ವಿಂಗಡಣೆ ಇಂದು ಮಧ್ಯಾಹ್ನ ಪೂರ್ಣಗೊಳ್ಳಲಿದೆ ಎಂದು ನೀವು (ಎಜಿ) ಹೇಳುತ್ತಿದ್ದೀರಿ.

ಅದನ್ನು ಲಿಖಿತವಾಗಿ ತಿಳಿಸಿ. ನಿಮ್ಮ ಹೇಳಿಕೆಯನ್ನು ಮುಚ್ಚಳಿಕೆಯನ್ನಾಗಿ ಪರಿಗಣಿಸಲಾಗುವುದು” ಎಂದು ಹೇಳಿದರು. ಅಂತಿಮವಾಗಿ ಪೀಠವು “ಎಜಿ ಅವರ ಹೇಳಿಕೆಯನ್ನು ಮುಚ್ಚಳಿಕೆಯನ್ನಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಅವರು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಬೇಕು. ಸರ್ಕಾರ ಮುಚ್ಚಳಿಕೆ ಉಲ್ಲಂಘಿಸಿದರೆ ಆಯೋಗವು ನ್ಯಾಯಾಲಯದ ಮೆಟ್ಟಿಲೇರಬಹುದು. ಅರ್ಜಿಯಲ್ಲಿ ಎತ್ತಿರುವ ಇತರೆ ಅಂಶಗಳನ್ನು ಮುಕ್ತವಾಗಿ ಇರಲಿಸಲಾಗಿದ್ದು, ಅವುಗಳನ್ನು ಸೂಕ್ತ ಸಂದರ್ಭದಲ್ಲಿ ಕೈಗೆತ್ತಿಕೊಳ್ಳಲಾಗುವುದುಎಂದು ಆದೇಶದಲ್ಲಿ ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.

[t4b-ticker]

You May Also Like

More From Author

+ There are no comments

Add yours