ವೇಣೂರು: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನಿನ್ಯಾರು ಎಂಬಲ್ಲಿ ಚಿರತೆಯೊಂದು ಅರೆಪ್ರಜ್ಞೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆಗೆ ಒಳಪಡಿಸಿದ್ದು, ಚಿರತೆ ಚೇತರಿಸಿಕೊಂಡಿದೆ. ಇತ್ತ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಸ್ಥಳೀಯರ ಮಾಹಿತಿ ಮೇರೆಗೆ ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದಾವಿಸಿದ್ದು, ವ್ಯಾಪ್ತಿಯಲ್ಲಿ ಚಿರತೆಯ ಓಡಾಡುವಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಯ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಚಿರತೆ ಹಿಡಿಯುವ ಬೋನನ್ನು ಸ್ನೇಹಗಿರಿ ಪರಿಸರದ ವ್ಯಾಪ್ತಿಯಲ್ಲಿ ಅಳವಡಿಸಲಾಗಿತ್ತು. ಮಂಗಳೂರು ವೃತ್ತದ ವನ್ಯಜೀವಿ ಪಶುವೈದ್ಯ ಡಾ. ಯಶಸ್ವಿ ನಾರಾವಿ ಅರೆವಳಿಕೆ ಮದ್ದು ನೀಡಿ ಚಿರತೆಯನ್ನು ರಕ್ಷಿಸಲಾಗಿದೆ.





