ಹೊಸಂಗಡಿ: ಗ್ರಾಮ ಪಂಚಾಯತ್ ಹೊಸಂಗಡಿ, ಪಶು ವೈದ್ಯಕೀಯ ಇಲಾಖೆ, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ಮತ್ತು ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಹಭಾಗಿತ್ವದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.
ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರು, ಪಶು ಸಂಗೋಪನ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಒ ಕಾರ್ಯಕ್ರಮ ನಿರ್ವಹಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.





