ವೇಣೂರು: ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.), ಶ್ರೀ ಸತ್ಯನಾರಾಯಣ ಭಜನಾ ಮಂದಿರ (ರಿ.) ಗುಂಡೂರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಪ್ರಗತಿ ಬಂಧು ಒಕ್ಕೂಟ ಗುಂಡೂರಿ, ಗ್ರಾಮ ಪಂಚಾಯತ್ ಆರಂಬೋಡಿ, ಲಯನ್ಸ್ ಕ್ಲಬ್ ವೇಣೂರು, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ಹಾಗೂ ಯುವಸೇವಾ ಸಂಗಮ ಸೇವಾ ಟ್ರಸ್ಟ್ (ರಿ.) ವೇಣೂರು ಇವರ ಜಂಟಿ ಆಶ್ರಯದಲ್ಲಿ ಕಸ್ತೂರ್ ಬಾ ಮೆಡಿಕಲ್ ಕಾಲೇಜು, ಜ್ಯೋತಿ ಮಂಗಳೂರು (ಕೆಎಂಸಿ) ಇವರ ನುರಿತ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವು ಗುಂಡೂರಿಯ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಫೆ. 15ರಂದು ಬೆಳಿಗ್ಗೆ 9-30ರಿಂದ ನಡೆಯಲಿದೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.
ವೇಣೂರಿನ ಜನಪ್ರಿಯ ವೈದ್ಯರಾಗಿರುವ ಡಾ. ಶಾಂತಿಪ್ರಸಾದ್ ಅವರು ಶಿಬಿರವನ್ನು ಉದ್ಘಾಟಿಸಲಿದ್ದು, ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಹಾಗೂ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಅಧ್ಯಕ್ಷರಾಗಿರುವ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಅತಿಥಿ ಗಣ್ಯರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶಿಬಿರದಲ್ಲಿ ವಿಶೇಷವಾಗಿ ಕಣ್ಣು ಪರೀಕ್ಷೆ, ಕಿವಿ, ಮೂಗು, ಗಂಟಲು ಪರೀಕ್ಷೆ (ಇಎನ್ಟಿ), ಮೂಳೆ ಸಂಬಂಧಿತ ರೋಗ ತಪಾಸಣೆ ಹಾಗೂ ಸಾಮಾನ್ಯ ರೋಗಗಳ ಬಗ್ಗೆ ತಜ್ಞ ವೈದ್ಯರುಗಳು ತಪಾಸಣೆ ನಡೆಸಲಿದ್ದಾರೆ.





