ವೇಣೂರು: ದ.ಕ. ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ 2024-25ನೇ ಸಾಲಿನ ಎಸ್ಡಿಎಂಸಿಗಳ ಕಾರ್ಯವೈಖರಿ ಸಮೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವೇಣೂರು ಸರಕಾರಿ ಪ್ರೌಢಶಾಲೆಯ ಎಸ್ಡಿಎಂಸಿಗೆ ಶಹಬಾಸ್ಗಿರಿ ದೊರೆತ್ತಿದೆ.
ಶಾಲೆಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದಲ್ಲದೆ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಎಸ್ಡಿಎಂಸಿ ಶ್ರಮಿಸಿದ ಸಾಧನೆಯನ್ನು ಪರಿಗಣಿಸಿ ಜಿಲ್ಲೆಯಲ್ಲಿ ಹಲವು ಶಾಲೆಗಳಿಗೆ ಪ್ರಶಸ್ತಿಗಳು ಬಂದಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಎರಡು ಶಾಲೆಯ ಎಸ್ಡಿಎಂಸಿಗಳು ಅತ್ಯುತ್ತಮ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವ ಬಗ್ಗೆ ಮಾಹಿತಿ ಲಭಿಸಿದೆ. ಬೆಳ್ತಂಗಡಿಯ ಬೆಳಾಲು ಪೆರಿಯಡ್ಕ ಹಿರಿಯ ಪ್ರಾಥಮಿಕ ಶಾಲೆ ಮತ್ತು ವೇಣೂರು ಸರಕಾರಿ ಪ್ರೌಢಶಾಲೆಯ ಎಸ್ಡಿಎಂಸಿಯು ಬೆಸ್ಟ್ ಎಸ್ಡಿಎಂಸಿ ಎಂದು ಪರಿಗಣಿಸಲಾಗಿದೆ.





