ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ,ಏಪ್ರಿಲ್06:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 16 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
 ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು, ಬ್ಯಾಲಹಾಳ್, ಗೊಡಬನಹಾಳ್, ಇಸ್ಸಾಮುದ್ರ ಮತ್ತು ಹೊಳಲ್ಕೆರೆ ತಾಲ್ಲೂಕಿನ ವಿಶ್ವನಾಥನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ, ಮಾಸಿಕ ರೂ. 6000/-ಗಳಂತೆ ಗೌರವ ಧನ ಆಧಾರದ ಮೇಲೆ ಕೆಲಸ ಮಾಡಲು, ಆಸಕ್ತರಿರುವ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ರಿಂದ 45 ವರ್ಷ ವಯೋಮಾನದೊಳಗಿರುವ ಮತ್ತು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕು ಪಂಚಾಯತ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ ದೂರವಾಣಿ ಸಂಖ್ಯೆ- 08194-235284/86ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours