ಕೋಟೆ ನಾಡಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರ್ತಿಲ್ಲ: ಜಿಲ್ಲೆಯಲ್ಲಿ 436 ಜನರಿಗೆ ಕೋವಿಡ್ ಸೋಂಕು ದೃಢ: 162 ಮಂದಿ ಬಿಡುಗಡೆ.

 

 

 

 

ಜಿಲ್ಲೆಯಲ್ಲಿ 436 ಜನರಿಗೆ ಕೋವಿಡ್ ಸೋಂಕು ದೃಢ: 162 ಮಂದಿ ಬಿಡುಗಡೆ
*
ಚಿತ್ರದುರ್ಗ,ಮೇ.18:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 436 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21,573 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 201, ಚಳ್ಳಕೆರೆ 66, ಹಿರಿಯೂರು 56, ಹೊಳಲ್ಕೆರೆ 47, ಹೊಸದುರ್ಗ 35, ಮೊಳಕಾಲ್ಮುರು ತಾಲ್ಲೂಕಿನಲ್ಲಿ 23 ಹೊರ ಜಿಲ್ಲೆಯ 08 ಪ್ರಕರಣ ಸೇರಿದಂತೆ ಒಟ್ಟು 436 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 162 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 2674 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 436 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 21,573 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಒಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 114 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 18,004 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 3,455 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 8,5,106 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

 

 

  ಈವರೆಗೆ 4,53,806 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,31,112 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 362 ಜನರ ವರದಿ ಬರುವುದು ಬಾಕಿ ಇದೆ. 759 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours