ದಾವಣಗೆರೆ, ಮಾ. 15: ದಾವಣಗೆರೆಯಲ್ಲಿ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳು ಪರಸ್ಪರ ಹಾರ ಬದಲಿಸಿಕೊಂಡು ಮತ್ತೆ ಒಂದಾಗಿ ಬಾಳಲು ನಿರ್ಧಾರ ಮಾಡಿದ್ದಾರೆ. ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಆಯೋಜಿಸಲಾದ ಈ ಮಹತ್ವದ ವಿದ್ಯಮಾನಕ್ಕೆ ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಡಿ.ಕೆ.ವೇಲಾ ಅವರು ಶುಭ ಹಾರೈಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನ್ಯಾಯಾಂಗ ಅಧಿಕಾರಿಯೊಬ್ಬರು, ಈ ಜಿಲ್ಲೆಯಲ್ಲಿ ನಡೆದಿರುವ ಎಲ್ಲಾ ರಾಷ್ಟ್ರೀಯ ಲೋಕ ಅದಾಲತ್ಗಳ ಜವಾಬ್ದಾರಿಯನ್ನು ನಿಭಾಯಿಸಿ, ಅಂದಾಜು 500 ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.





