ವೇಣೂರು: ಗುಂಡೂರಿ ಗ್ರಾಮದ ತುಂಬೆದಲೆಕ್ಕಿಯಲ್ಲಿರುವ ಶ್ರೀ ಸತ್ಯನಾರಾಯಣ ಭಜನ ಮಂದಿರದಲ್ಲಿ ೫೨ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ ಹಾಗೂ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವು ಎ.10ರಂದು ನಡೆಯಲಿದೆ.
ಅಂದು ಬೆಳಿಗ್ಗೆ 8-00 ಗಂಟೆಯಿಂದ ಮಾರೂರು ಖಂಡಿಗದ ವೇ.ಮೂ. ಶ್ರೀ ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ಸಾಮೂಹಿಕ ಸತ್ಯನಾರಾಯಣ ಆರಂಭವಾಗಲಿದೆ.
ಪೂರ್ವಾಹ್ನ 11-00 ಗಂಟೆಯಿಂದ ಧಾರ್ಮಿಕಸಭೆ ನಡೆಯಲಿದ್ದು, ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಭಜನ ಮಂದಿರದ ಆಡಳಿತ ಮಂಡಳಿ ಅಧ್ಯಕ್ಷರಾದ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು ಅಧ್ಯಕ್ಷತೆ ವಹಿಸಲಿದ್ದು, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಸೇರಿದಂತೆ ಹಲವು ಅತಿಥಿ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5-30ರಿಂದ ಕಟೀಲು ಮೇಳದವರಿಂದ ಚೌಕಿ ಪೂಜೆ ನಡೆದು ಶ್ರೀ ದೇವಿ ಮಹಾತ್ಮೆ ಎಂಬ ಪೌರಾಣಿಕ ಯಕ್ಷಗಾನ ಬಯಲಾಟವನ್ನು ಆಡಿ ತೋರಿಸಲಿದ್ದಾರೆ.





