ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಭೀಕರ ದುರಂತ ಸಂಭವಿಸಿದೆ. ಶಾಲೆಗೆ ರಜೆ ಇದ್ದಿದ್ದರಿಂದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದನಾಲ್ವರು ಮಕ್ಕಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಪೋಷಕರಿಗೆ ಮತ್ತು ಗ್ರಾಮಸ್ಥರಿಗೆ ತೀವ್ರ ಆಘಾತವನ್ನುಂಟು ಮಾಡಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ಕೃಷಿ ಹೊಂಡಗಳ ಸುರಕ್ಷತೆಯ ಬಗ್ಗೆ ಈ ದುರ್ಘಟನೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
ಮಕ್ಕಳ ಪಾಲಿಗೆ ಮೃತ್ಯುಕೂಪವಾದ ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ





