ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆಯಾಗುತ್ತಲಿವೆ. ಈ ನಡುವೆಯೇ ಕೆಲ ಹೆದ್ದಾರಿಗಳು ಟೋಲ್ ಶುಲ್ಕ ವಿಚಾರವಾಗಿ ಸುದ್ದಿಯಲ್ಲಿರುತ್ತವೆ. ಹಾಗೆಯೇ ಇದೀಗ ಮಂಗಳೂರು-ಕಾಸರಗೋಡು NH ಮುನ್ನಲೆಗೆ ಬಂದಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಈಗಾಗಲೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ವಾಹನ ಸಂಚಾರಕ್ಕೆ ಮುಕ್ತವಾಗಿದ್ದು, ಟೋಲ್ ಕೂಡ ಸಂಗ್ರಹ ಮಾಡಲಾಗುತ್ತಿದೆ. ಇನ್ನೂ ಇದು ಉದ್ಘಾಟನೆಯಾದ ಆರಂಭದಿಂದಲೂ ಟೋಲ್ ವಿಚಾರಕ್ಕೆ ವಾಹನ ಸವಾರರು ಹಾಗೂ ಅಲ್ಲಿನ ಸಿಬ್ಬಂದಿ ನಡುವೆ ಮಾರಾಮಾರಿ ಘಟನೆಗಳು ನಡೆದಿವೆ. ಅಲ್ಲದೆ, ಇದೀಗ ಸುರಕ್ಷತೆಯಿಲ್ಲ ಎಂಬ ವಿಚಾರಕ್ಕೂ ಆಗಾಗ ಈ ಎಕ್ಸ್ಪ್ರೆಸ್ ವೇ ಸುದ್ದಿಯಾಗುತ್ತಲಿದೆ.
ಅಲ್ಲದೆ, ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಕರ್ನಾಟಕ ಭಾಗದಲ್ಲಿ ಕಾಮಗಾರಿ ಮುಕ್ತಾಯವಾಗಿದ್ದು, ವಾಹನ ಸಂಚಾರಕ್ಕೂ ಅವಕಾಶ ಕಲ್ಪಿಸಿಕೊಡಲಾಗಿದೆ. ಈಗಾಗಲೇ ಟೋಲ್ ಶುಲ್ಕವನ್ನು ಕೂಡ ರಿವೀಲ್ ಮಾಡಲಾಗಿದೆ. ಈ ಎಕ್ಸ್ಪ್ರೆಸ್ ವೇ ಇನ್ನೂ ಉದ್ಘಾಟನೆ ಆಗಿಲ್ಲ. ಇದಕ್ಕೂ ಕಾರಣ ಇದೆ. ಕರ್ನಾಟಕ ಭಾಗದಲ್ಲಿ ಮಾತ್ರ ಮುಕ್ತಾಯವಾಗಿದೆ. ಆದರೆ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಕಾಮಗಾರಿ ಬಾಕಿ ಉಳಿದ ಕಾರಣ ಉದ್ಘಾಟನೆ ದಿನಾಂಕ ಮುಂದೂಡಿಕೆ ಆಗುತ್ತಲಿದ್ದು, ಮುಂದಿನ ವರ್ಷದ ಮಧ್ಯದಲ್ಲಿ ಲೋಕಾರ್ಪಣೆ ಆಗಲಿದೆ ಎಂದು ಎನ್ಎಚ್ಎಐ ತಿಳಿಸಿದೆ.
ಪ್ರತಿಭಟನೆಗಳ ಹಿನ್ನೆಲೆ ಬುಧವಾರದಿಂದ ಆರಂಭ ಆಗಬೇಕಿದ್ದ ಟೋಲ್ ಶುಲ್ಕ ವಸೂಲಿಯನ್ನ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭರವಸೆ ನೀಡಿದ್ದಾರೆ ಎಂದು ಶಾಸಕ ಎ.ಕೆ.ಎಂ.ಅಶ್ರಫ್ ತಿಳಿಸಿದ್ದಾರೆ. ಟೋಲ್ ಗೇಟ್ ವಿರುದ್ಧ ಹೋರಾಟ ಸಮಿತಿ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ನವೆಂಬರ್ 14ರಂದು ನಡೆಯಲಿದೆ. ಆದ್ದರಿಂದ ಅಂತಿಮ ತೀರ್ಪು ಬರುವವರೆಗೆ ಶುಲ್ಕ ವಸೂಲು ಮಾಡಬಾರದೆಂದು ಸೂಚನೆ ನೀಡಲಾಗಿದೆ.





