ಬೆಳ್ತಂಗಡಿ: ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾದ ಆನಂದ ಸಾಲಿಯಾನ್ ಕೆಂಪ್ಲಬರಿ ಅವರಿಗೆ ಕ್ಷೀರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಮಡoತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನೇತೃತ್ವದಲ್ಲಿ ನಡೆದ 72ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ 2025 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.





