ಕಡತಗಳ ಅನಾಗತ್ಯ ವಿಳಂಬದ ಬಗ್ಗೆ ಗಮನ ಸೆಳೆದಿದ್ದ ರಕ್ಷಿತ್ ಶಿವರಾಂ
ಬೆಳ್ತಂಗಡಿ: ಏಕನಿವೇಶನ ಹಾಗೂ ೯/೧೧ ಅರ್ಜಿಗಳನ್ನು ದೀರ್ಘಕಾಲದಲ್ಲಿ ಕಚೇರಿಗಳಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಕ್ತವಾದ ದೂರಿನ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ. ಈ ಸಮಸ್ಯೆ ಬಗ್ಗೆ ಗಮನವನ್ನು ಸೆಳೆದರು, ಸಚಿವರು ಕೂಡಲೇ ಅಧಿಕಾರಿಗಳೊಂದಿಗೆ ಈ ಸಮಸ್ಯೆ ಬಗ್ಗೆ ಚರ್ಚಿಸಿ ಪ್ರಸ್ತುತ ತಾಲೂಕಿಗೆ ಅಧಿಕಾರಿಗಳು ಒಂದು ದಿನ ಮಾತ್ರ ಭೇಟಿ ನೀಡುತ್ತಿದ್ದು. ಮುಂದಿನ ದಿನಗಳಲ್ಲಿ ಮೂರು ದಿನ ತಾಲೂಕಿಗೆ ಅಧಿಕಾರಿಗಳು ಭೇಟಿ ನೀಡಿ ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ ಸೂಚಿಸಿದರು. . ಸತೀಶ್ ಕೆ. ಕಾಶಿಪಟ್ಣ, ಶೇಖರ ಕುಕ್ಕೇಡಿ ಮತ್ತಿತರರು ಜೊತೆಗಿದ್ದರು.





