ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಜಿಲ್ಲಾಡಳಿತಕ್ಕೆ 2 ಟನ್ ಆಕ್ಸಿಜನ್ ಹಸ್ತಾಂತರ ಜಿಲ್ಲಾಡಳಿತದಿಂದ ಧನ್ಯವಾದ:ಡಿಸಿ ಕವಿತಾ ಎಸ್.ಮನ್ನಿಕೇರಿ.

 

 

 

 

ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಜಿಲ್ಲಾಡಳಿತಕ್ಕೆ 2 ಟನ್ ಆಕ್ಸಿಜನ್ ಹಸ್ತಾಂತರ
ಚಿತ್ರದುರ್ಗ,ಜೂನ್‌07:
ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆಗೆ  2 ಟನ್ ಪ್ರಾಣವಾಯು ಆಕ್ಸಿಜನ್‌ಅನ್ನು ಉಚಿತವಾಗಿ ಸೋಮವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
 ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ 2 ಟನ್ ಉಚಿತ ಪ್ರಾಣವಾಯು ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಈಗಾಗಲೇ 10 ಆಕ್ಸಿಜನ್ ಕಾನ್ಸಂಟ್ರೇಟರ್ಸ್ಗಳನ್ನು ನೀಡಿದ್ದಾರೆ. ಇಂದು ಜಿಲ್ಲಾಡಳಿತಕ್ಕೆ 2 ಟನ್ ಆಕ್ಸಿಜನ್‌ಅನ್ನು ನೀಡಲಾಗಿದ್ದು, ಜಿಲ್ಲಾಡಳಿತದ ಪರವಾಗಿ ಧನ್ಯವಾದ ತಿಳಿಸಿದರು.  
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ರೂಪಾಜನಾರ್ಧನ್, ನಾಗರಾಜ್ ಸಂಗA ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಜಿಲ್ಲಾಡಳಿತಕ್ಕೆ 2 ಟನ್ ಆಕ್ಸಿಜನ್ ಹಸ್ತಾಂತರಿಸಲಾಯಿತು.

 

 

[t4b-ticker]

You May Also Like

More From Author

+ There are no comments

Add yours