ವೇಣೂರು: ಸಾವ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಅಧ್ಯಕ್ಷರೂ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರೂ ಆದ ಶ್ರೀಮತಿ ಆಶಾ ಅವರಿಗೆ ಕ್ಷೀರ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆಯನ್ನು ಗುರುತಿಸಿ ಕ್ಷೀರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಮಡಂತ್ಯಾರ್ ನಲ್ಲಿ ಜರಗಿದ ದ.ಕ. ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ನಡೆದಿದೆ. ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿಇ ಹಾಗೂ ನಿರ್ದೇಶಕರು ಅಭಿನಂದನೆ ಸಲ್ಲಿಸಿದ್ದಾರೆ.





