ಬೆಂಗಳೂರು: ಉಷ್ಣ ಅಲೆಯಿಂದ ಬೇಸತ್ತಿದ್ದ ಕರಾವಳಿಯ ಅಲ್ಲಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆಯಾಗಿದ್ದು, ಬಿಸಿ ಬಿಸಿಯಾಗಿದ್ದ ಕಡಲ ನಾಡು ತಂಪಾಗಿದೆ.
ಇಂದು ಆಲಿಕಲ್ಲು ಮಳೆಯ ಅಲರ್ಟ್
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ಹೀಟ್ ವೇವ್ ಅಲರ್ಟ್ ಇತ್ತು. ಅದರ ಜೊತೆಗೆ ಸಾಧಾರಣ ಮಳೆಯೂ ಅಲ್ಲಲ್ಲಿ ಕಂಡು ಬರುತ್ತಿತ್ತು. ಆದರೆ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ೪೦-೫೦ ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ರಭಸದಿಂದ ಸುರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಎಲ್ಲೆಡೆ ಶುಷ್ಕ ಹವಾಮಾನ ಇರಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆ ಸೇರಿದಂತೆ ಉಳಿದೆಲ್ಲ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ಡಿದೆ.





