ಚಿತ್ರದುರ್ಗ :ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಭಾನುವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ 128 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,707ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 49, ಚಳ್ಳಕೆರೆ 9, ಹಿರಿಯೂರು 23, ಹೊಳಲ್ಕೆರೆ 12, ಹೊಸದುರ್ಗ 29, ಮೊಳಕಾಲ್ಮುರು ತಾಲ್ಲೂಕಿನ 6 ಪ್ರಕರಣಗಳು ಸೇರಿದಂತೆ ಒಟ್ಟು 128 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 593 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 3065 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 128 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 33,707ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಈಗಾಗಲೆ 29,684 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 3,858 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,32,457 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 5,20,019 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,84,341 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1117 ಜನರ ವರದಿ ಬರುವುದು ಬಾಕಿ ಇದೆ. 854 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
+ There are no comments
Add yours