ಬೆಂಗಳೂರು: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಕರ್ನಾಟಕ ಸರ್ಕಾರದಿಂದ ಈಡಿಗ/ಬಿಲ್ಲವ ಹಾಗೂ ಸಂಬಂಧಿತ ಸಮುದಾಯಗಳ ಆರ್ಥಿಕ-ಸಾಮಾಜಿಕ ಅಭಿವೃದ್ಧಿಗಾಗಿ ಸ್ಥಾಪಿಸಲಾದ ನಿಗಮದ ಕಚೇರಿಯು ಬೆಂಗಳೂರಿನ ಕಾವೇರಿ ಭವನದಲ್ಲಿ ಉದ್ಘಾಟನೆಗೊಂಡಿತು.
ಉದ್ಘಾಟನಾ ಸಮಾರಂಭದಲ್ಲಿ ತಾಲೂಕಿನಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷರಾದ ಪಿತಾಂಭರ ಹೇರಾಜೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ. ಸಾಹುಲ್ ಹಮೀದ್. ರಾಜ ನಿಗಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ ಮುದ್ರಾಡಿಯವರಿಗೆ ಅಭಿನಂದನೆ ಸಲ್ಲಿಸಿದರು.





