ಕೇರಳಂ: ಮೇ 18: ಅರಬ್ಬಿ ಸಮುದ್ರದಲ್ಲಿ ಮುಂಗಾರು ಪೂರ್ವ ಅಲೆಗಳ ಅಬ್ಬರ ಚುರುಕುಗೊಂಡಿದ್ದು, ಕೇರಳಂ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರಸ್ತುತ ಕೇರಳಂನ ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟ ಹಾಗೂ ಬಿರುಗಾಳಿ ಸಹಿತ ಮಳೆ ನಿರಂತರವಾಗಿ ಸುರಿಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಕೇರಳಕ್ಕೆ ಪ್ರವಾಸದ ಪ್ಲಾನ್ ಇದ್ದರೆ ಮುಂದೂಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಪ್ರಸ್ತುತ ಕೇರಳಕ್ಕೆ ಪ್ರಯಾಣಿಸಲು ಯೋಜನೆ ರೂಪಿಸಿಕೊಂಡಿರುವವರು ನಿರ್ಧಾರವನ್ನು ಸದ್ಯಕ್ಕೆ ಕೈಬಿಡುವುದು ಸೂಕ್ತ ಎಂದು ಸೂಚಿಸಲಾಗಿದೆ. ಭಾರೀ ಮಳೆಯಿಂದ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸಲು ಈ ಎಚ್ಚರಿಕೆ ನೀಡಲಾಗಿದೆ.





