ವೇಣೂರು: ಬೆಳ್ತಂಗಡಿ ಶ್ರೀ ಗುರುನಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಮರೋಡಿ ಪೊಸರಡ್ಕ ಶ್ರೀ ದೈವ ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ, ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಬ್ರಹ್ಮಕುಂಭಾಭಿಷೇಕಕ್ಕೆ ರೂ. 25,000 ದೇಣಿಗೆಯನ್ನು ನೀಡಲಾಗಿದೆ.
ಪೊಸರಡ್ಕ ಬ್ರಹ್ಮಕುಂಭಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರು ಹಾಗು ಬೆಳ್ತಂಗಡಿ ಶ್ರೀ ಗುರುನಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರು ಆದ ನಾರಾಯಣ ಪೂಜಾರಿ ಉಚ್ಚೂರು ಇವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರು, ಕೋಶಾಧಿಕಾರಿ, ಮಾಜಿ ಅಧ್ಯಕ್ಷರುಗಳು, ಹಾಗೂ ನಿರ್ದೇಶಕರುಗಳು ಹಾಜರಿದ್ದರು.





