ಕಳೆದ ಶುಕ್ರವಾರವಷ್ಟೇ 3 ರೂಪಾಯಿ ಹೆಚ್ಚಳವಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ, ಇಂದು ಮುಂಜಾನೆ ಮತ್ತೊಮ್ಮೆ ಪ್ರತಿ ಲೀಟರ್ಗೆ 90 ಪೈಸೆಯಷ್ಟು ದುಬಾರಿಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಈ ಸರಣಿ ಬೆಲೆ ಏರಿಕೆಯು ಗ್ರಾಹಕರಿಗೆ ದೊಡ್ಡ ಶಾಕ್ ನೀಡಿದ್ದು, ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ.
ದೇಶಾದ್ಯಂತ ಗ್ರಾಹಕರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಶುಕ್ರವಾರದಂದು (ಮೇ 15) ಇಂಧನ ದರ 3 ರೂ.ನಷ್ಟು ಏರಿಕೆಯಾಗಿತ್ತು. ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ಗೆ ಸರಾಸರಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ.
ದೈನಂದಿನ ಅಗತ್ಯ ವಸ್ತುಗಳ ಮೇಲೆ ಇಂಧನ ದರ ಏರಿಕೆಯ ನೇರ ಪರಿಣಾಮ
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯು ದೈನಂದಿನ ಬಳಕೆಯ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣ ವ್ಯಾಪಾರಿಗಳು, ಸಾರಿಗೆ ಉದ್ಯಮದಲ್ಲಿ ತೊಡಗಿರುವವರು, ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವವರು ಮತ್ತು ಪ್ರತಿದಿನ ಸ್ವಂತ ವಾಹನಗಳನ್ನು ಬಳಸುವ ಜನಸಾಮಾನ್ಯರು ಈ ಬೆಲೆ ಏರಿಕೆಯ ನೇರ ಹೊಡೆತವನ್ನು ಅನುಭವಿಸಬೇಕಾಗುತ್ತದೆ.





