ಬೆಳ್ತಂಗಡಿ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಹೊರಬಿದ್ದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿನಿ ರಾಜ್ಯಮಟ್ಟದಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ. ಗುರುವಾಯನಕೆರೆಯ ಪ್ರತಿಷ್ಠಿತ ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ಪೂರ್ಣ ಅಂಕಗಳನ್ನು ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪೊನ್ನಮ್ಮಗೆ ಈ ಹಿಂದೆ 597 ಅಂಕ ಗಳಿಸಿದ್ದರು.

ಸಂಸ್ಥೆಯ ಅಧ್ಯಕ್ಷರಿಂದ ಅಭಿನಂದನೆ
ವಿದ್ಯಾರ್ಥಿನಿಯ ಈ ಐತಿಹಾಸಿಕ ಸಾಧನೆಗೆ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಕಾಲೇಜಿನ ವಿದ್ಯಾರ್ಥಿನಿ ಯಾನ ಪೊನ್ನಮ್ಮ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ನಮಗೆ ಹೆಮ್ಮೆಯ ವಿಚಾರ. ಎಕ್ಸೆಲ್ ಪಿಯು ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಮತ್ತು ಶಿಕ್ಷಕರ ಮಾರ್ಗದರ್ಶನದಿಂದಾಗಿ ಇಂದು ನಮ್ಮ ಸಂಸ್ಥೆಯು ರಾಜ್ಯದಲ್ಲಿ ಉನ್ನತ ಶಿಕ್ಷಣದ ಕನಸು ಕಾಣುವ ವಿದ್ಯಾರ್ಥಿಗಳಿಗೆ ನಂಬರ್ ಒನ್ ಕಾಲೇಜಾಗಿ ಹೊರಹೊಮ್ಮುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.





