ವೇಣೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ವೇಣೂರು ಘಟಕದ ಪದಗ್ರಹಣ ಸಮಾರಂಭ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ. 16ರಂದು ಕೊಕ್ರಾಡಿಯ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಸಂಜೆ 5-30ರಿಂದ ನಡೆಯಲಿದೆ.
ಸಮಾರಂಭದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಪದಪ್ರಧಾನ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾದ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ ಆರ್., ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಮರೋಡಿ ದೇವಸ್ಥಾನದ ಪ್ರ. ಕಾರ್ಯದರ್ಶಿ ಜಯಂತ್ ಕೋಟ್ಯಾನ್, ಪೆರಾಡಿ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸತೀಶ್ ಕೆ., ಕಂಬಳ ಕೋಣಗಳ ಯಜಮಾನ ಗಣೇಶ್ ನಾರಾಯಣ ಪಂಡಿತ್, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಅಂಡಿಂಜೆ ಗ್ರಾ.ಪಂ. ಅಧ್ಯಕ್ಷ ನಿತೀನ್ ಮುಂಡೇವು ಭಾಗವಹಿಸಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಪೂಜಾರಿ ಮಾಂಜ, ಪಿಡಿಒ ರಾಘವೇಂದ್ರ ಪಾಟೀಲ್, ಮಂಜಪ್ಪ ಪೂಜಾರಿ ಕೊಕ್ರಾಡಿ ಹಾಗೂ ಹರೀಶ್ ಕುಮಾರ್ ಪೊಕ್ಕಿ, ವೇಣೂರು ಘಟಕದ ನಿಯೋಜಿತ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ, ನಿಯೋಜಿತ ಪ್ರ. ಕಾರ್ಯದರ್ಶಿ ದಕ್ಷಾ ಅಂಬಲ ಅಂಡಿಂಜೆ ಸೇರಿದಂತೆ ಹಲವು ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ.





