ಲಡಾಖ್ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್ ಚಲಾಯಿಸುತ್ತಿದ್ದರು.
ಅಧಿಕಾರಿಗಳು ಸುರಕ್ಷಿತ, ಸೆಲ್ಫಿ ವೈರಲ್
ಹೆಲಿಕಾಪ್ಟರ್ ಪತನಗೊಂಡ ತಕ್ಷಣವೇ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದ್ದು, ಅದೃಷ್ಟವಶಾತ್ ಮೂವರಿಗೂ ಕೇವಲ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಭೀಕರತೆಯಿಂದ ಪ್ರಾಣಾಪಾಯದಿಂದ ಪಾರಾದ ನಂತರ, ಮೇಜರ್ ಜನರಲ್ ಸಚಿನ್ ಮೆಹ್ತಾ ಅವರು ಕ್ಲಿಕ್ಕಿಸಿಕೊಂಡ ಆಶ್ಚರ್ಯಕರ ಸೆಲ್ಫಿ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ.





