ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ರಾಜ್ಯ ಮಟ್ಟದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಬೆಳ್ತಂಗಡಿಯ ವಿದ್ಯಾರ್ಥಿನಿ ದಿಯಾ ಎಂ. ಕೋಟ್ಯಾನ್ ಭಾಜನರಾಗಿದ್ದಾರೆ.
ದಿಯಾ ಅವರು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ‘ವಿಜಯವಾಣಿ’ ದಿನಪತ್ರಿಕೆಯ ವರದಿಗಾರರಾದ ಮನೋಹರ್ ಬಳೆಂಜ ಮತ್ತು ಲಿಖಿತ ದಂಪತಿಯ ಪುತ್ರಿ.





