ಶಿವಮೊಗ್ಗ, ಮೇ. 27: ಸಿದ್ದರಾಮಯ್ಯ ಬಿಟ್ಟು ಯಾರೇ ಮುಖ್ಯಮಂತ್ರಿ ಆದರೂ ಅದು ತಾತ್ಕಾಲಿಕ. ರಾಜ್ಯದಲ್ಲಿ ಅವಧಿ ಪೂರ್ಣ ಚುನಾವಣೆ ಬಂದೇ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಮತ್ತು ಅಸಮಾಧಾನದಿಂದ ರಾಜ್ಯದ ಆಡಳಿತ ಕುಸಿದಿದ್ದು, ಇದು ಬಿಜೆಪಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಸಿದ್ದರಾಮಯ್ಯನವರು ಇಷ್ಟು ಸುಲಭವಾಗಿ ರಾಜೀನಾಮೆ ನೀಡುತ್ತಾರೆ ಎಂದು ಭಾವಿಸಿರಲಿಲ್ಲ ಎಂದವರು ಹೇಳಿದ್ದಾರೆ.





