ಎರಡನೇ ಅವಧಿಗೆ ಕರ್ನಾಟಕ ಮುಖ್ಯಮಂತ್ರಯಾಗಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಅವರು ಹುದ್ದೆ ತೊರೆದಿದ್ದು, ರಾಜ್ಯಪಾಲರ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.
ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ. ಆ ಮೂಲಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ವರ್ಷಗಳಿಂದಲೂ ಊಹಾಪೋಹಗಳಿಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ಅಥವಾ ಅಧಿಕಾರ ಹಂಚಿಕೆ ವಿಚಾರಕ್ಕೆ ಅಂತಿಮ ತೆರೆ ಬಿದ್ದಿದೆ.





