ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯದ ಲಕ್ಷಾಂತರ ಮಂದಿ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ತೀವ್ರ ನೋವು ಮತ್ತು ಮೌನಕ್ಕೆ ಕಾರಣವಾಗಿದೆ.
ಹೆಚ್ಚಿನ ಕಾರ್ಯರ್ತರು ಬೆಳಗ್ಗಿಂದಲೂ ತಮ್ಮ ಎಲ್ಲ ಕೆಲಸಗಳನ್ನು ಬದಿಗಿಟ್ಟು ಟಿವಿಯ ಮುಂದೆ ಕುಳಿತು ರಾಜೀನಾಮೆ ಪ್ರಕ್ರಿಯೆ ಮತ್ತು ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ಎಲ್ಲಾ ಬೆಳವಣಿಗೆಗಳನ್ನು ವೀಕ್ಷಿಸಿದ್ದಾರೆ. ಸಿದ್ದರಾಮಯ್ಯನವರ ದಕ್ಷ ಆಡಳಿತ ಮತ್ತು ಬಡವರ ಪರ ಕಾಳಜಿಯನ್ನು ಸ್ಮರಿಸಿರುವ ಅಭಿಮಾನಿಗಳು ಅವರು ಇನ್ನೂ ಎರಡು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಿತ್ತು ಎಂದು ಆಶಿಸಿದ್ದಾರೆ. ಹೈಕಮಾಂಡ್ನ ಅರೀಕ್ಷಿತ ರ್ಧಾರದಿಂದ ತಮಗೆ ನೋವಾಗಿದೆ ಎಂದು ಅವರು ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದರೂ, ಸಿದ್ದರಾಮಯ್ಯನವರ ರ್ಗಮನವನ್ನು ಅಭಿಮಾನಿಗಳು ಅರಗಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಸಿದ್ದರಾಮಯ್ಯನವರ ಮೇಲಿದ್ದ ವೈಯಕ್ತಿಕ ಪ್ರೀತಿ ಮತ್ತು ಅವರ ಸರಳ ಸ್ವಭಾವವನ್ನು ಗ್ರಾಮಸ್ಥರು ನೆನಪಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರು ಜಾರಿಗೆ ತಂದಿರುವ ಯೋಜನೆಗಳನ್ನು ನೆನೆದು ಬಾವುಕರಾಗುತ್ತಿದ್ದಾರೆ. ರಾಜಕೀಯ ಕ್ಷೇತ್ರದ ನಿಜವಾದ ಕರ್ಮಯೋಗಿ, ನುಡಿದಂತೆ ನಡೆದ ಹೃದಯವಂತ ಎಂದು ಅಭಿಮಾನಿಗಳು ಬಣ್ಣಿಸಿದ್ದಾರೆ.





